“ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಯಾವ ಕಾಂಗ್ರೆಸ್ಸಿಗರೂ ಬರಲ್ಲ”: ಅಂತಿಮ ನಿರ್ಣಯ ತಿಳಿಸಿದ ಸೋನಿಯಾ ಗಾಂಧಿ

in Uncategorized 48 views

ಜನವರಿ 22 ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗುವುದಿಲ್ಲ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಇದೇ ಜನವರಿ 22ರಂದು ಭವ್ಯ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ. ದೇಶಾದ್ಯಂತ ಹಲವಾರು ಗಣ್ಯರಿಗೆ ಅಯೋಧ್ಯಾ ರಾಮಮಂದಿರದ ಉದ್ಘಾಟನೆಗೆ ಆಹ್ವಾನ ಮಾಡಲಾಗುತ್ತಿದೆ. ರಾಮಲಲ್ಲಾ ಪ್ರತಿಷ್ಠಾಪನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂತ್ರಿಗಳಿಗೆ ಭಾವೋದ್ವೇಗದ, ಅಬ್ಬರದ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಸಚಿವರಿಗೆ ವಿವಾದವನ್ನುಂಟು ಮಾಡುವ ಹೇಳಿಕೆ ನೀಡುವುದನ್ನ ತಪ್ಪಿಸುವಂತೆ ಸಚಿವರಿಗೆ ಸೂಚಿಸಿದ್ದಾರೆ.

Advertisement

ರಾಮಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಹ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಇದೀಗ ಕಾಂಗ್ರೆಸ್‌ ಈ ರಾಮಂದಿರ ಆಹ್ವಾನ ತಿರಸ್ಕರಿಸಿದೆ.

ಜನವರಿ 22 ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗುವುದಿಲ್ಲ.

ಅಯೋಧ್ಯೆ ಆರ್‌‌ಎಸ್‌ಎಸ್‌-ಬಿಜೆಪಿ ಕಾರ್ಯಕ್ರಮ ಎಂದ ಕಾಂಗ್ರೆಸ್‌!

ಕಾಂಗ್ರೆಸ್‌ ನಾಯಕರು ಯಾರು ಅಯೋಧ್ಯೆಗೆ ಹೋಗುವುದಿಲ್ಲ ಅಂತ ಸ್ವತಃ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಈ ಅಯೋಧ್ಯೆ ರಾಮಮಂದಿರ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಕ್ರಮ ಎಂದು ಹೇಳಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಹೋಗುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಸ್ಪಷ್ಟನೆ ನೀಡಿದೆ.

ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಹ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ

Advertisement
Share this on...