ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪತ್ನಿ ಹಾಗೂ ಇಂಟೀರಿಯರ್ ಡಿಸೈನರ್ ಗೌರಿ ಖಾನ್ ಮೇಲೆ 30 ಕೋಟಿ ವಂಚನೆ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗೌರಿಗೆ ನೋಟಿಸ್ ಕಳುಹಿಸಿದೆ.
ಲಕ್ನೋ ಮೂಲದ ರಿಯಲ್ ಎಸ್ಟೇಟ್ ಕಂಪನಿ ತುಳಸಿಯಾನಿ ಗ್ರೂಪ್ ನ ಬ್ರಾಂಡ್ ಅಂಬಾಸಿಡರ್ ಆಗಿರುವ ಗೌರಿ ಅವರನ್ನು ಇಡಿ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಸಂಸ್ಥೆಯ ಹೂಡಿಕೆದಾರರು ಬ್ಯಾಂಕ್ ಗಳಿಗೆ 30 ಕೋಟಿ ರೂಪಾಯಿ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಪ್ರಕರಣದಲ್ಲಿ ಇಡಿ ಗೌರಿಗೆ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ, ಇಡಿ ನೋಟಿಸ್ ಬಗ್ಗೆ ಶಾರುಖ್ ಆಗಲಿ, ಗೌರಿ ಖಾನ್ ಆಗಲಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ತುಳಸಿಯಾನಿ ಗ್ರೂಪ್ ಹೂಡಿಕೆದಾರರು ಮತ್ತು ಬ್ಯಾಂಕ್ಗಳಿಗೆ ಸರಿಸುಮಾರು 30 ಕೋಟಿ ರೂಪಾಯಿಗಳ ನಷ್ಟವನ್ನು ಉಂಟು ಮಾಡಿದೆ ಎಂದು ಹೇಳಲಾಗ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿ ಖಾನ್ ಅವರನ್ನು ಸಹ ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸಲು ಇಡಿ ಕ್ರಮ ಕೈಗೊಳ್ಳುತ್ತಿದೆ.
ತುಳಸಿಯಾನಿ ಗ್ರೂಪ್ನ ಬ್ರಾಂಡ್ ಅಂಬಾಸಿಡರ್ ಆಗಲು ಗೌರಿ ಎಷ್ಟು ಹಣವನ್ನು ಪಡೆದರು ಎಂಬಂತಹ ವಿವಿಧ ಅಂಶಗಳನ್ನು ಇಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಇಂತಹ ಹಲವು ವಿಷಯಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಾರೆ. ಗೌರಿ ಖಾನ್ ಅವರಿಂದ ಕಂಪನಿಯ ಬ್ರಾಂಡ್ ಅಂಬಾಸಿಡರ್ ಹುದ್ದೆಗೆ ಮಾಡಿಕೊಂಡಿರುವ ಒಪ್ಪಂದಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಡಿ ಪಡೆಯಲಿದೆ.
ಶಾರುಖ್ ಪತ್ನಿ ಗೌರಿ ಖಾನ್ಗೆ ಹೊಸ ಸಂಕಷ್ಟ ಎದುರಾಗಿದೆ. ಇಂಟೀರಿಯರ್ ಡಿಸೈನರ್ ಆಗಿರುವ ಗೌರಿ ಖಾನ್, ನಿರ್ಮಾಪಕಿ ಆಗಿಯೂ ಬಾಲಿವುಡ್ ನಲ್ಲಿ ಹೆಸರು ಮಾಡಿದ್ದಾರೆ.