ನಟ ಸಂಚಾರಿ ವಿಜಯ್ ಬಗ್ಗೆ ಅಮೇರಿಕಾ ಮಾಡಿದ ಈ ಕೆಲಸಕ್ಕೆ ಹ್ಯಾಟ್ಸಾಫ್ ಎಂದ ಕನ್ನಡಿಗರು: ಅಷ್ಟಕ್ಕೂ ಅಮೇರಿಕಾ ಮಾಡಿದ್ದೇನು ಗೊತ್ತಾ?

in FILM NEWS/Kannada News/News 531 views

ಬೆಂಗಳೂರು: ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲೇ ಟ್ವೀಟ್​ ಮಾಡಿದೆ.

“ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್​ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್​’ ತಿಂಗಳ ಆಚರಣೆಯ ಅಂಗವಾಗಿ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ, ಅವಳು’ ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದರು ಸಂಚಾರಿ ವಿಜಯ್‌. ಆರ್​ಐಪಿ” ಎಂದು ಟ್ವೀಟ್​ ಮೂಲಕ ಅಮೆರಿಕಾ ರಾಯಭಾರ ಕಚೇರಿ ಸಂತಾಪ ತಿಳಿಸಿದೆ.

Advertisement

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅಗಲಿಕೆ ಕನ್ನಡ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ. ಇವರ ನಿಧನಕ್ಕೆ ಸಿನಿ ರಂಗ, ಅಭಿಮಾನಿಗಳು, ಕುಟುಂಬಸ್ಥರು, ಗಣ್ಯರು ಕಂಬನಿ ಮಿಡಿದ್ದಿದ್ದಾರೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜತೆಗೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರೊಫೆಸರ್ ಆಗಿದ್ದ ಬಿ‌.ವಿಜಯ್ ರಾಷ್ಟ್ರಪ್ರಶಸ್ತಿ ನಟ ಸಂಚಾರಿ ವಿಜಯ್ ಆಗಿ ಬದಲಾಗಿದ್ದೇ ಒಂದು ರೋಚಕ ಸ್ಟೋರಿ

ಅ ಪ ಘಾ ತ ದಲ್ಲಿ ತೀ ವ್ರ ಗಾ ಯ ಗೊಂಡಿದ್ದ ನಟ ಸಂಚಾರಿ ವಿಜಯ್ ಇಂದು ಮೆದುಳು ನಿ ಶ್ಕ್ರಿ ಯ ಗೊಂಡು ತಮ್ಮ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಸಾಮಾನ್ಯ ಹಳ್ಳಿಯಿಂದ ಬಂದ ಯುವಕನೊಬ್ಬ ಸ್ಯಾಂಡಲ್​ವುಡ್​ ಸೇರಿದಂತೆ ವಿವಿಧ ಭಾಷೆಯಲ್ಲಿ ನಟನಾಗಿ ಮಿಂಚಿದ್ದೇ ರೋಚಕ ಕಥೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿಯ, ರಂಗಾಪುರ ಗ್ರಾಮದಲ್ಲಿ ಜನಸಿದ ಬಿ. ವಿಜಯ್ ಕುಮಾರ್ ಇಂದು ಸ್ಯಾಂಡಲ್​ವುಡ್​​ನಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ. ಸಂಚಾರಿ ಹೆಸರಿನ ನಾಟಕ ತಂಡದಲ್ಲಿ ಸೇವೆಸಲ್ಲಿಸಿರುವುದರಿಂದ ಬಿ. ವಿಜಯ್ ಕುಮಾರ್ ಅಂತಿದ್ದ ಅವರ ಹೆಸರು ಸಂಚಾರಿ ವಿಜಯ್ ಎಂದು ಖ್ಯಾತಿ ಪಡೆದರು.

ಕಲಾವಿದರ ಕುಟುಂಬದಿಂದ ಬಂದಿದ್ದ ಸಂಚಾರಿ ವಿಜಯ್​, ರಂಗಭೂಮಿಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಅವರ ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದರು. ಇಂತಹ ಕುಟುಂಬದಲ್ಲಿ ಜನಿಸಿದ ಇವರು, ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪೂರೈಸಿದ ಅವರು, ಕೆಲಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ನಟನೆಯಲ್ಲೇ ನನ್ನ ಭವಿಷ್ಯ ಎಂದು ಕನಸು ಕಂಡಿದ್ದ ಅವರು ತಮ್ಮ ಕನಸನ್ನು ಈಡೇರಿಸಿಕೊಳ್ಳಲು ಉಪನ್ಯಾಸಕ ಕೆಲಸಕ್ಕೆ ವಿದಾಯ ಹೇಳಿ ಪೂರ್ಣಪ್ರಮಾಣವಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡರು.

ಹತ್ತು ವರ್ಷಗಳಿಗೂ ಅಧಿಕವಾಗಿ ಸಂಚಾರಿ ಥಿಯೇಟರ್​​ ರಂಗತಂಡದ ಹಲಾವಾರು ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ಕನ್ನಡದ ಹಲವಾರು ರಂಗತಂಡಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲಿ ನಟನೆ ಮಾತ್ರವಲ್ಲದೇ, ಎರಡು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಚಿತ್ರರಂಗದಲ್ಲೂ ತಮ್ಮನ್ನ ತಾವು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರು ಇಂದು ತಮ್ಮೆಲ್ಲ ಕನಸುಗಳನ್ನು ಅರ್ಧಕ್ಕೆ ನಿಲ್ಲಿಸಿ, ಇಹಲೋಕ ತ್ಯಜಿಸಿದ್ದಾರೆ.

ನಾನು ಅವನಲ್ಲ ಅವಳು, ಒಗ್ಗರಣೆ,ಹರಿವು, ಕೃಷ್ಣ ತುಳಸಿ, ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು, ಅಷ್ಟೇ ಅಲ್ಲದೇ ಪಂಚರಂಗಿ ಪೋಂ..ಪೋಂ,ಪಾಂಡುರಂಗ ವಿಠಲ, ಪಾರ್ವತಿ ಪರಮೇಶ್ವರ ಸೇರಿದಂತೆ ಇತರ ಧಾರಾವಾಹಿಗಳ ಮೂಲಕ ಕಿರುತೆರೆಯಲ್ಲೂ ರಂಜಿಸಿದ್ದರು.

ಕಂಬನಿ ಮಿಡಿದ ಸುದೀಪ್

ಸಂಚಾರಿ ವಿಜಯ್​ ಅವರು ಇನ್ನಿಲ್ಲ ಎಂದು ಕಿಚ್ಚ ಸುದೀಪ್ ಅವರು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ರಾಜಕೀಯ ನಾಯಕರು ಹಾಗೂ ಸಿನಿರಂಗ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಕೆಲವೇ ಗಂಟೆಯ ಹಿಂದೆ ವಿಜಯ್​ ಅವರ ಸಹೋದರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವೈದ್ಯರು ಹೇಳುತ್ತಿರುವುದನ್ನು ನೋಡಿದರೆ ಚೇತರಿಕೆ ಕಷ್ಟ ಎಂದೆನಿಸುತ್ತಿದೆ. ಸದಾ ಸಮಾಜದ ಒಳಿತಾಗಿ ಶ್ರಮಿಸುತ್ತಿದ್ದ ಅಣ್ಣನ ಅಂ ಗಾಂ ಗ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ಕಣ್ಣೀರಿಟ್ಟಿದ್ದರು.

2011ರಲ್ಲಿ ತೆರೆಕಂಡ ರಂಗಪ್ಪ ಹೋಗ್ಬಿಟ್ನಾ ಚಿತ್ರದ ಮೂಲಕ ಸಂಚಾರಿ ವಿಜಯ್​ ಸಿನಿರಂಗಕ್ಕೆ ಕಾಲಿಟ್ಟರು. ನಾನು ಅವನಲ್ಲ ಅವಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಒಗ್ಗರಣೆ, ಕೃಷ್ಣ ತುಳಸಿ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ತಮಿಳು ಸಿನಿಮಾಗಳಲ್ಲೂ ಸಂಚಾರಿ ವಿಜಯ್ ನಟಿಸಿದ್ದಾರೆ. ಮೊದಲ ಅಲೆಯಿಂದಾಗಿ ಆಗಿದ್ದ ಲಾಕ್​ಡೌನ್​ ತೆರೆವುಗೊಂಡ ನಂತರ ರಿಲೀಸ್ ಆಗಿದ್ದ ಸಿನಿಮಾ ಆಕ್ಟ್ 1978 ಚಿತ್ರದಲ್ಲೂ ನಟಿಸಿದ್ದಾರೆ.

ಗೆಳೆಯ ನವೀನ್ ಜೊತೆ ಸಂಚಾರಿ ವಿಜಯ್ ಅವರು ಶನಿವಾರ ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಅ ಪ ಘಾ ತ ಸಂಭವಿಸಿತ್ತು. ಜೆಪಿ ನಗರ 7ನೇ ಹಂತದಲ್ಲಿ ಅ ಪ ಘಾ ತ ಸಂಭವಿಸಿದ್ದು, ಗೆಳೆಯ ನವೀನ್​ಗೂ ತೀ ವ್ರ ಗಾ ಯ ಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊನ್ನೆ ರಾತ್ರಿ 11 ಗಂಟೆಗೆ ಘಟನೆ ನಡೆದಿದ್ದು, ಮಳೆ ಜೋರಾಗಿದ್ದ ಕಾರಣ ವೇಗವಾಗಿ ಬೈಕ್​ ಓಡಿಸಿದ್ದೇ ಅ ಪ ಘಾ ತ ಕ್ಕೆ ಕಾರಣ ಎನ್ನಲಾಗಿದೆ. ನವೀನ್​ ಅವರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸಹ ಚಿಂತಾಜನಕವಾಗಿದೆ.

Advertisement
Share this on...