“ನಮ್ಮಪ್ಪನ ಜೀವ ಈ ಮಣ್ಣೊಳಗೆ ಹೋಗೊದರೊಳಗೆ ನನ್ನನ್ನ….” ಗೊಳೋ ಅಂತ ಕಣ್ಣೀರಿಟ್ಟ ಕುಮಾರಸ್ವಾಮಿ

in Uncategorized 1,680 views

ರಾಮನಗರ:

Advertisement
ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು.

ಚನ್ನಪಟ್ಟಣದಲ್ಲಿ ಮಾತಾಡಿದ ಹೆಚ್.ಡಿ. ಕುಮಾರಸ್ವಾಮಿ.. ನಾನು ರಾಜಕೀಯ ವಿದಾಯ ಹೇಳ್ತಿಲ್ಲ. 2028ರ ವಿಧಾನಸಭೆಗೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸ್ತೀನಿ. ಆಗ ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಬಹುದು. ನಾನು ಯಾವುದೇ ಕಾರಣಕ್ಕೂ ರಾಜಕೀಯ ಬಿಡಲ್ಲ. 2028ಕ್ಕೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದರು.

ನಾನು ನಮ್ಮ ಕುಟುಂಬ ಜನರನ್ನೇ ನಂಬಿ ಬಂದಿದ್ದೇವೆ. ನಮ್ಮ ತಂದೆ ಕಾಲದಿಂದಲೂ ಅಷ್ಟೇ. ದೇವೇಗೌಡರನ್ನು ಇಲ್ಲಿಗೆ ಕರೆಸಿ ಸನ್ಮಾನ ಮಾಡಬೇಕು ಅನ್ನೋ ಆಸೆ ನಿಮ್ಮದು. ಆದರೆ ಇಂದು ಅವರು ಇಲ್ಲಿಗೆ ಬರುವ ಪರಿಸ್ಥಿತಿಯಲ್ಲಿ ಇಲ್ಲ. ಅವರು ಮಣ್ಣಿಗೆ ಹೋಗೋದರೊಳಗೆ ಜೆಡಿಎಸ್ ಪಕ್ಷವನ್ನು ಸ್ವತಂತ್ರ್ಯವಾಗಿ ಅಧಿಕಾರಕ್ಕೆ ತರಬೇಕು ಎಂಬ ಆಸೆ ದೇವೇಗೌಡರಿಗಿದೆ ಎಂದು ಹೇಳುತ್ತಾ ಕುಮಾರಸ್ವಾಮಿ ಭಾವುಕರಾದರು.

ನಮ್ಮ ಪಂಚರತ್ನ ಯಾತ್ರೆ ಬಗ್ಗೆ, ಅಲ್ಲಿ ಸೇರುವ ಜನರ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿಲ್ಲ, ಬದಲಾಗಿ ದಿನದಲ್ಲಿ ಸುಮಾರು 1ಗಂಟೆಗೂ ಮೇಲೆ ಹಾಸನ ಟಿಕೆಟ್ ಸುದ್ಧಿಯ ಬಗ್ಗೆ ಪ್ರಸಾರ ಮಾಡುತ್ತಾರೆ, ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನು ನಿಲ್ಲಿಸಿ ಅದರ ಬದಲಿಗೆ, ಹಾಸನ, ಭವಾನಿ ರೇವಣ್ಣ, ಕುಮಾರಸ್ವಾಮಿ ಮತ್ತು ಎಚ್.ಡಿ ದೇವೇಗೌಡರ ವಿಷಯದ ಬಗ್ಗೆ ಸುದ್ದಿ ಹಾಕುತ್ತಿದ್ದಾರೆ. ನಮ್ಮ ಪಂಚರತ್ನ ಕಾರ್ಯಕ್ರಮದ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇದನ್ನೂ ಓದಿ:

ಬಿಜೆಪಿಗೆ ಬೆಂಬಲ ನೀಡಿದ್ದೇನೆ, ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ – ಸುಮಲತಾ

ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಕ್ಷ ಸೇರುವಂತೆ ಆಹ್ವಾನ ಬಂದಿದೆ. ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಮತ್ತೊಮ್ಮೆ ಜನಾಭಿಪ್ರಾಯ ಕೇಳಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಮದ್ದೂರು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಚುನಾವಣೆಗೆ ಎಷ್ಟು ದಿನವಿದೆ ಎನ್ನುವುದು ಮುಖ್ಯವಲ್ಲ. ಆದರೆ, ಅನುಕೂಲಕರ ವಾತಾವರಣ ಹೇಗಿದೆ ಎಂಬುದು ಮುಖ್ಯ ಎಂದು ಪ್ರತಿಕ್ರಿಯಿಸಿದರು.

ಕೆಲವು ಅಭಿವೃದ್ಧಿ ಕೆಲಸಗಳ ವಿಚಾರದ ಹಿನ್ನೆಲೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದೇನೆ, ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಬೆಂಗಳೂರು ಮೈಸೂರು ಎಕ್ಸ್‍ಪ್ರೆಸ್ ಹೈವೆ ಉದ್ಘಾಟನೆಗೆ ಪ್ರಧಾನಮಂತ್ರಿ ಬರುತ್ತಿದ್ದಾರೆ. ಸಂಸದೆಯಾಗಿ ನಾನೂ ಭಾಗವಹಿಸುತ್ತಿದ್ದೇನೆ. ಪ್ರಧಾನಿ ಅವರಿಗೆ ಕೆಲವು ಕೆಲಸಗಳ ಬಗ್ಗೆ ಮನವಿ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ನನ್ನ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬಾರದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಏಕೆ ಹೇಳಿದ್ದಾರೆಯೋ ಗೊತ್ತಿಲ್ಲ. ಆದರೆ, ತಾವು ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೋಗಲು ಅಂಬರೀಶ್ ಅವರ ಕೊಡುಗೆ ಏನು ಎಂಬುದನ್ನು ಗಂಗಾಧರ್ ನೆನಪು ಮಾಡಿಕೊಳ್ಳಬೇಕು ಎಂದು ಸುಮಲತಾ ತಿರುಗೇಟು ನೀಡಿದರು.

Advertisement
Share this on...