ಕೊರೊನಾ ಹಾವಳಿ ಎಲ್ಲೆಡೆ ಹೆಚ್ಚಳವಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಯಾವುದೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಅತ್ತ ಸ್ಯಾಂಡಲ್ ವುಡ್ ನಲ್ಲಿ ಯಾವ ಸಿನಿಮಾ ನಿರ್ಮಾಣದ ಕಾರ್ಯವಾಗಲೀ, ಬಿಡುಗಡೆಯಾಗಲೀ ಆಗುತ್ತಿಲ್ಲ. ಹಾಗಾಗಿ ಸಿನಿಮಾಗೆ ಸಂಬಂಧಿಸಿದ ಯಾವುದೇ ಕೆಲಸ ಸಾಗದೇ ಸಿನಿಮಾಗಳನ್ನೇ ನಂಬಿಕೊಂಡವರು ಇಂದು ಬೀದಿ ಬೀಳುವ ಸಂದರ್ಭ ಎದುರಾಗಿದೆ.
ಇದೇ ವೇಳೆ ಕೋಟಿ ರಾಮ ಅವರಂತಹ ದೊಡ್ಡ ದೊಡ್ಡ ನಿರ್ಮಾಪಕರೇ ಸಾವಿಗೀಡಾಗುತ್ತಿದ್ದಾರೆ. ಚಿತ್ರರಂಗದ ಅನ್ನದಾತರೆನಿಸಿದ ರಾಮು ಅವರು ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಮತ್ತೊಬ್ಬ ಟಾಪ್ ನಟನ ಸಾವು ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ್ದ ರನ್ನ ಚಿತ್ರದ ನಿರ್ಮಾಪಕ ಚಂದ್ರಶೇಖರ್ ಅವರು ಕೂಡ ಇತ್ತೀಚೆಗೆ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಇದೇ ವೇಳೆ ನವರಸ ನಾಯಕ ಜಗ್ಗೇಶ್ ಅವರ ತಮ್ಮ ಕೋಮಲ್ ಅವರಿಗೂ ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆ ಸೇರಿದ್ದಾರೆ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಅವರು ಕೂಡ ಕೊರೊನಾಗೆ ಬಲಿಯಾಗಿದ್ದಾರೆ. ರಾಮು ಅವರ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಪ್ಪಿದ್ದಾರೆ.
ರಾಮು ಕಣಗಾಲ್ ಅವರು ಭರತನಾಟ್ಯದಲ್ಲಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರು. ಅಲ್ಲದೇ, ಕಣಗಾಲ್ ಹೆಸರಿನಲ್ಲಿ ನೃತ್ಯ ಶಾಲೆಯನ್ನು ನಡೆಸುತ್ತಿದ್ದರು. ಇವರು ಸಾಕಷ್ಟು ಚಿತ್ರಗಳಲ್ಲಿಯೂ ಬಣ್ಣ ಹಚ್ಚಿದ್ದಲ್ಲದೇ, ಕಿರುತೆರೆಯಲ್ಲೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ರಾಮು ಕಣಗಾಲ್ ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬುದು ನಿಜಕ್ಕೂ ವಿಷಾದನೀಯ ಎನಿಸುತ್ತದೆ.