ಬಿಗ್ ಬ್ರೇಕಿಂಗ್: ಅಚ್ಚರಿಯ ಬೆಳವಣಿಗೆಯಲ್ಲಿ ರಮೇಶ್ ಜಾರಕಿಹೊಳಿ ಸಮೇತ ಈ ಶಾಸಕನಿಗೂ ಸಿಗಲಿದೆ ಮಂತ್ರಿ ಸ್ಥಾನ… ಯಾರದು ನೋಡಿ

in Kannada News/News 373 views

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್‌ ಅವರಿಗೆ ಅತಿ ಶೀಘ್ರದಲ್ಲೇ ಸ್ಥಾನ ಸಿಗಲಿದೆ ಎಂದು ಅರಬಾವಿ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಆರ್‌.ಟಿ.ನಗರದಲ್ಲಿ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ನಾನು ಸಚಿವ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ನಾನು ಕೆಎಂಎಫ್‌ನಲ್ಲೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಆ ಹುದ್ದೆಯೇ ಸಾಕು ಎಂದರು.

ನಾವು (ಜಾರಕಿಹೊಳಿ ಸೋದರರು) ಪಕ್ಷ ಹಾಗೂ ಸರ್ಕಾರದ ವಿರುದ್ಧ ಹೋಗದಿಲ್ಲ. ಯಾವುದೇ ಗೌಪ್ಯ ಸಭೆ ನಡೆಸಿಲ್ಲ. ವಿಶ್ವಾಸದಿಂದ ಕೆಲ ಶಾಸಕರು ಆಗಾಗ್ಗೆ ಒಂದೆಡೆ ಸೇರುತ್ತೇವೆ ಅಷ್ಟೇ. ಆದರೆ ಆ ಸಭೆಗಳಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

ಮಾಜಿ ಸಚಿವರಾದ ರಮೇಶ್‌ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್‌ ಅವರಿಗೆ ಖಂಡಿತ ಒಳ್ಳೆಯದಾಗುತ್ತದೆ. ಬೊಮ್ಮಾಯಿ ಸರ್ಕಾರದಲ್ಲಿ ಆ ಇಬ್ಬರಿಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಏನಂದಿದ್ರು ರಮೇಶ್ ಜಾರಕಿಹೊಳಿ?

ನನಗೆ ಮತ್ತು ನಮ್ಮ ಆಪ್ತರಿಗೆ ಮಂತ್ರಿಸ್ಥಾನ ನೀಡದಿರುವ ಬಗ್ಗೆ ಯಾವುದೇ ಬೇಸರವಿಲ್ಲ. ಪಕ್ಷದ ಹಿರಿಯರು ಮತ್ತು ಸಂಘ ಪರಿವಾರದ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ 2023ರಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾನು ಯಾವ ತ್ಯಾಗಕ್ಕೂ ಸಿದ್ಧ ಎಂಬುದಾಗಿ ಶಾಸಕ ರಮೇಶ್‌ ಜಾರಿಕಿಹೊಳಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ಶಾಸಕ ಮಹೇಶ್‌ ಕುಮಠಳ್ಳಿ ಅವರೊಂದಿಗೆ ಪಕ್ಷದ ಮುಖಂಡರ ಸಭೆ, ಹಿರಿಯ ಆರೆಸ್ಸೆಸ್‌ ಮುಖಂಡ ಅರವಿಂದ ದೇಶಪಾಂಡೆ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶುಕ್ರವಾರ ದೆಹಲಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಿದ್ದೇನೆ. ಅಲ್ಲಿ ನನಗೆ ಮತ್ತು ನಮ್ಮ ಬೆಂಬಲಿಗ ಶಾಸಕರಿಗೆ ಯಾವುದೇ ಮಂತ್ರಿಸ್ಥಾನ ನೀಡುವ ಬಗ್ಗೆ ಲಾಬಿ ನಡೆಸಿಲ್ಲ ಎಂದಿದ್ದರು.

ಸಿಡಿ ಪ್ರಕರಣಲ್ಲಿ ತನಿಖೆ ಮುಕ್ತಾಯವಾದರೂ ಕ್ಲೀನ್‌ ಚಿಟ್‌ ಸಿಗದ ಬಗ್ಗೆ ಈ ರೀತಿ ಪ್ರತಿಕ್ರಿಯೆ ನೀಡಿ, ಕ್ಲೀನ್‌ ಚಿಟ್‌ ಪಡೆಯಲು ಯಾವುದೇ ಆತುರವಿಲ್ಲ. ರಾಜಕಾರಣದಲ್ಲಿ ಶೂರರಿಗೆ ಷಡ್ಯಂತ್ರ ಮಾಡುವವರು ಇದ್ದೇ ಇರುತ್ತಾರೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುತ್ತೇನೆ ಎಂದಿದ್ದರು.

Advertisement
Share this on...