ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ (South Africa vs India) ಭಾರತ ಮುನ್ನಡೆಯಲ್ಲಿದೆ. ಮೊದಲ ದಿನದಾಟದ ಮೊದಲ ಅವಧಿಯಲ್ಲಿಯೇ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್ಗಳು, ಹರಿಣಗಳನ್ನು ಅತ್ಯಲ್ಪ ಮೊತ್ತಕ್ಕೆ ಆಲೌಟ್ ಮಾಡಿದ್ದಾರೆ. ಕೇಪ್ಟೌನ್ ಟೆಸ್ಟ್ನಲ್ಲಿ ಅಬ್ಬರಿಸಿದ ಮೊಹಮ್ಮದ್ ಸಿರಾಜ್, ಹರಿಣಗಳನ್ನು ಕೇವಲ 55 ರನ್ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ನಡುವೆ ಪಂದ್ಯದ ನಡುವೆ ವಿರಾಟ್ ಕೊಹ್ಲಿ ನಡೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಂದ್ಯದಲ್ಲಿ ಮೇಲಿಂದ ಮೇಲೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ದಕ್ಷಿಣ ಆಫ್ರಿಕಾ ಕ್ರೀಸ್ಕಚ್ಚಿ ಆಡಲು ವಿಫಲವಾಯ್ತು. ಈ ನಡುವೆ ಡೇವಿಡ್ ಬೆಡಿಂಗ್ಹ್ಯಾಮ್ ಮತ್ತು ಕೈಲ್ ವೆರೆನ್ನೆ ಐದನೇ ವಿಕೆಟ್ಗೆ 19 ರನ್ಗಳ ಸಣ್ಣ ಜೊತೆಯಾಟವಾಡಿದರು. ಆದರೂ ಭಾರತದ ಎದುರು ಪ್ರತಿರೋಧ ಒಡ್ಡಲು ತಂಡದಿಂದ ಸಾಧ್ಯವಾಗಲಿಲ್ಲ.
ಈ ನಡುವೆ ಮಾರ್ಕೊ ಜಾನ್ಸೆನ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ವೇಳೆ ಮೈದಾಕ್ಕೆ ಆಲ್ರೌಂಡರ್ ಕೇಶವ್ ಮಹಾರಾಜ್ ಬ್ಯಾಟ್ ಬೀಸಲು ಬಂದರು. ಭಾರತ ಮೂಲದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಕ್ರೀಸ್ಗೆ ಆಗಮಿಸುತ್ತಿದ್ದಂತೆ, ನ್ಯೂಲ್ಯಾಂಡ್ಸ್ನಲ್ಲಿರುವ ಸ್ಪೀಕರ್ಗಳಲ್ಲಿ ‘ರಾಮ್ ಸಿಯಾ ರಾಮ್’ ಹಾಡು ಮೊಳಗಿತು. ದಕ್ಷಿಣ ಆಫ್ರಿಕಾದಲ್ಲಿ ಎಲ್ಲೇ ಪಂದ್ಯ ನಡೆದರೂ ಕೇಶವ್ ಎಂಟ್ರಿಗೆ ಇದೇ ಹಾಡನ್ನು ಹಾಕಲಾಗುತ್ತದೆ. ಇದು ಇಂಡೋ-ಆಫ್ರಿಕಾ ಏಕದಿನ ಸರಣಿ ವೇಳೆ ಖಚಿತವಾಗಿತ್ತು.
ಅತ್ತ ಸ್ಲಿಪ್ಸ್ನಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ, ಮೈದಾನದಲ್ಲಿ ಹಾಡು ಮೊಳಗುತ್ತಿದ್ದಂತೆಯೇ ಅದಕ್ಕೆ ತಕ್ಕನಾಗಿ ಪ್ರತಿಕ್ರಿಯೆ ನೀಡಲು ಶುರು ಮಾಡಿದ್ದಾರೆ. ಈ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ದೃಶ್ಯವು ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದ್ದು. ಕೊಹ್ಲಿಯೆ ರಿಯಾಕ್ಷನ್ ಅಭಿಮಾನಿಗಳಿಗೆ ಇಷ್ಟವಾಗಿದೆ.
जय श्रीराम#Ram #ayodhya #rammandir #viratkohli #INDvSA #AyodhyaDham pic.twitter.com/aCQ6E95wI7
— भाजपा महाराष्ट्र (@BJP4Maharashtra) January 3, 2024
ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿ ಅಂಶ ಹೊರಹಾಕಿದ ಮೊಹಮ್ಮದ್ ಸಿರಾಜ್, ಕೇವಲ 15 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಬಳಿಸಿದರು. ಇದೇ ವೇಳೆ ಜಸ್ಪ್ರೀತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ತಲಾ ಎರಡು ವಿಕೆಟ್ ಪಡೆದರು.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಕೇಶವ್ ಮಹಾರಾಜ್ ಎಂಟ್ರಿಗೆ ಇದೇ ಹಾಡು ಹಾಕಲಾಗಿತ್ತು. ದಕ್ಷಿಣ ಆಫ್ರಿಕಾ ಚೇಸಿಂಗ್ ವೇಳೆ, ತಂಡ 33.2 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿದ್ದಾಗ ಆಲ್ರೌಂಡರ್ ಕೇಶವ್ ಮಹಾರಾಜ್ ಬ್ಯಾಟಿಂಗ್ ಮಾಡಲು ಬಂದರು. ಆಗ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಸ್ಪೀಕರ್ಗಳಲ್ಲಿ ‘ರಾಮ್ ಸಿಯಾ ರಾಮ್’ ಹಾಡು ಮೊಳಗಿತ್ತು.
ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿದ್ದ ಭಾರತದ ನಾಯಕ ರಾಹುಲ್, ಈ ಹಾಡನ್ನು ಆಲಿಸಿ ವಿಷಯವೊಂದನ್ನು ಗಮನಿಸಿದ್ದಾರೆ. ಕೇಶವ್ ಮಹಾರಾಜ್ ಪ್ರತಿ ಬಾರಿ ಬ್ಯಾಟಿಂಗ್ಗೆ ಕಾಲಿಟ್ಟಾಗಲೆಲ್ಲಾ ಈ ಹಾಡನ್ನೇ ನುಡಿಸುತ್ತಾರೆ ಎಂಬುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರಲ್ಲೇ ಆ ಪ್ರಶ್ನೆ ಕೇಳಿ ಖಚಿತಪಡಿಸಿಕೊಂಡಿದ್ದಾರೆ. ರಾಹುಲ್ ಮುಗುಳ್ನಗುವಿನೊಂದಿಗೆ ಪ್ರಶ್ನಿಸುತ್ತಿದ್ದಂತೆ ಮಹಾರಾಜ್ ಕೂಡಾ ‘ಹೌದು’ ಎಂದು ಒಪ್ಪಿಕೊಂಡಿದ್ದಾರೆ.