ಮೈಸೂರು: ಕರುನಾಡಲ್ಲಿ ಮತ್ತೆ ಹಿಜಾಬ್ ವಿವಾದ (Hijab Row) ಮತ್ತೆ ಭಾರೀ ಸದ್ದು ಮಾಡ್ತಿದೆ. ಇದರ ಬೆನ್ನಲ್ಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸಿಎಂ (CM Siddaramaiah), ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದಾರೆ. ಹಿಜಾಬ್ ನಿಷೇಧ ವಾಪಸ್ ವಿಚಾರಕ್ಕೆ ಮೈಸೂರಿನಲ್ಲಿ (Mysuru) ಸಿಎಂ ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ (Congress Govt) ಚಿಂತನೆ ನಡೆಸುತ್ತಿದೆ ಅಂತಾ ಹೇಳಿದ್ದೇನೆ ಅಷ್ಟೇ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಅಂತ ಸರ್ಕಾರದ ಹಂತದಲ್ಲಿ ಚರ್ಚೆ ಮಾಡುತ್ತೇನೆ ಅಂತಾ ಹೇಳಿದ್ದಾರೆ.
ಹಿಜಾಬ್ ಬ್ಯಾನ್ ವಾಪಸ್ ಬಗ್ಗೆ ಚಿಂತನೆ
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಸ್ಥಳದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಜನರು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಆ ಸಮಸ್ಯೆಗಳ ಬಗ್ಗೆ ನಾನು ಮಾತನಾಡುತ್ತಿದ್ದೆ. ಈ ವೇಳೆ ಹಿಜಾಬ್ ಕುರಿತಂತೆ ಪ್ರಶ್ನೆ ಕೇಳಿದರು. ಆದರೆ ಇನ್ನು ಹಿಜಾಬ್ ನಿಷೇಧ ವಾಪಸ್ ಇನ್ನು ಮಾಡಿಲ್ಲ. ಜನರ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ನಾವು ಹಿಜಾಬ್ ಬ್ಯಾನ್ ವಾಪಸ್ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದು ಹೇಳಿದ್ದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2021ರ ಡಿಸೆಂಬರ್ 27ರಂದು ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ದಂಗಲ್, ಹೈಕೋರ್ಟ್, ಸುಪ್ರೀಂಕೋರ್ಟ್‌ನಲ್ಲೂ ಸದ್ದು ಮಾಡಿತ್ತು. ಈ ಹಿಂದಿನ ಬಿಜೆಪಿ ಸರ್ಕಾರದ ಆದೇಶದ ವಿರುದ್ಧ ಉಡುಪಿಯ 6 ವಿದ್ಯಾರ್ಥಿನಿಯರು ಹೈಕೋರ್ಟ್ ಮೊರೆ ಹೋಗಿದ್ದರು. ಹಿಜಾಬ್ ಧರಿಸದಂತೆ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠದಲ್ಲಿ ಭಿನ್ನ ತೀರ್ಪು ಬಂದಿತ್ತು. ಸುಪ್ರೀಂಕೋರ್ಟ್‌ನಲ್ಲಿ ಇನ್ನೂ ಹಿಜಾಬ್ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ, ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯೋದಾಗಿ ಘೋಷಿಸಿದ್ದಾರೆ. ಉಡುಪು ಮತ್ತು ಊಟ ಅವರವರ ಇಷ್ಟ, ನಾನ್ಯಾಕೆ ಇದನ್ನ ಅಡ್ಡಿಪಡಿಸಲಿ ಅಂತ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಹೇಳಿದ್ದರು.
ಪ್ರಧಾನಿ @narendramodi ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು @BJP4India ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ.#Hijab pic.twitter.com/EIHU5V7zas
— Siddaramaiah (@siddaramaiah) December 22, 2023