ಬೆಂಗಳೂರು: ಕೊರೊನಾವೈರಸ್ ಸಾಂಕ್ರಾಮಿಕ ರೋಗ ಅಂಟಿಕೊಂಡವರಲ್ಲಿ ಮೃತಪಟ್ಟವರಿಗಿಂತ ಗುಣಮುಖರಾಗಿ ಹಿಂತಿರುಗಿದವರ ಸಂಖ್ಯೆಯೇ ಹೆಚ್ಚಾಗಿದೆ. ಕರ್ನಾಟಕದಲ್ಲೂ ಅಂಥದ್ದೇ ಒಂದು ಅಂಕಿ-ಅಂಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಅವರು ನೀಡಿದ್ದಾರೆ.
ಕರ್ನಾಟಕದಲ್ಲಿ ಕೊವಿಡ್-19 ಸೋಂಕು ಆರಂಭವಾದ ದಿನದಿಂದ ಇಂದಿನವರೆಗೆ ಒಂದು ದಿನದಲ್ಲೇ ಅತಿಹೆಚ್ಚು ಸೋಂಕಿತರು ಗುಣಮುಖರ ಸಂಖ್ಯೆ ಹೊಸ ದಾಖಲೆ ಬರೆದಿದೆ. ರಾಜ್ಯದಲ್ಲಿ ಮಂಗಳವಾರ ಹೊಸ ಪ್ರಕರಣಕ್ಕಿಂತ ಎರಡು ಪಟ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58 ಸಾವಿರದ 395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.
“ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ. ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ರಾಜ್ಯದಲ್ಲಿ ಇಂದು 30 ಸಾವಿರದ 309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಸಂಖ್ಯೆಯನ್ನು ಮೀರಿಸಿದೆ.
ಬೆಂಗಳೂರಿನಲ್ಲಿ 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನರು ಗುಣಮುಖರಾಗಿದ್ದಾರೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ. ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ.
— Dr Sudhakar K (@mla_sudhakar) May 18, 2021
ದೇಶದಲ್ಲಿ ಇಂದು ವರದಿಯಾದ ಪ್ರಕರಣಗಳೆಷ್ಟು?
ಭಾರತದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ಕಳೆದ ಮೂರು ದಿನಗಳಿಂದ ಸೋಂಕಿನ ಸಂಖ್ಯೆ ಇಳಿಮುಖದತ್ತ ಸಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ.
ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ದೊಡ್ಡ ಮಟ್ಟದಲ್ಲಿ ಏರಿಕೆಯಾಗುವುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,349 ಮಂದಿ ವೈರಸ್’ಗೆ ಬ-ಲಿ-ಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬ-ಲಿ-ಯಾದವರ ಸಂಖ್ಯೆ 2,78,719ಕ್ಕೆ ತಲುಪಿದೆ. ಇನ್ನು ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 33,53,765ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 4,22,436 ಮಂದಿ ಚೇತರಿಸಿಕೊಂಡಿದ್ದು ಈವರೆಗೂ ಗುಣಮುಖರಾದವರ ಸಂಖ್ಯೆ 2,15,96,512ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,69,223 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇಲ್ಲಿವರೆಗೆ 31,82,92,881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,44,53,149 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.