Pritam Gowda: ಕೊನೆ ಕ್ಷಣದಲ್ಲಿ ಪ್ರೀತಂಗೌಡರಿಗೆ ಸಚಿವ ಸ್ಥಾನ ಕೈ ತ ಪ್ಪಿ ದೆ. ಇದಕ್ಕೆ ಪ್ರಮುಖ ಕಾರಣ ದೇವೇಗೌಡರ ಕುಟುಂಬ ಎಂದು ಹೇಳಲಾಗುತ್ತಿದೆ.
ಹಾಸನ ಜಿಲ್ಲೆ ಜೆಡಿಎಸ್ ನ ಭ ದ್ರ ಕೋ ಟೆ. ಪ್ರಧಾನಿ ಮಂತ್ರಿ, ಮುಖ್ಯಮಂತ್ರಿಯನ್ನು ನೀಡಿದ ಜಿಲ್ಲೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರರಲ್ಲಿ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರೆ, ಜಿಲ್ಲೆಯ ಕೇಂದ್ರಬಿಂದು ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರೀತಂ ಜೆ.ಗೌಡ ಜಯಭೇರಿ ಬಾರಿಸುವ ಮೂಲಕ ಮೊದಲಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಾಸಕರಾದ ದಿನದಿಂದಲೂ ದೇವೇಗೌಡರ ಕುಟುಂಬದ ವಿ ರು ದ್ದ ತೊ ಡೆ ತ ಟ್ಟು ತ್ತ ಲೆ ಬಂದಿದ್ದರು. ಸಮ್ಮಿಶ್ರ ಸರ್ಕಾರ ಪ ತ ನ ಗೊ ಳಿ ಸಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿದವರಲ್ಲಿ ಪ್ರೀತಂಗೌಡ ಕೂಡ ಒಬ್ಬರು. ಆ ಪ ರೇ ಷ ನ್ ಕಮಲ ನಡೆಸುವಾಗ ದೇವೇಗೌಡರ ಕುಟುಂಬದ ಬಗ್ಗೆ ಹ ಗು ರ ವಾಗಿ ಮಾತನಾಡಿದಾಗ ಜೆಡಿಎಸ್ ಕಾರ್ಯಕರ್ತರು ಶಾಸಕರ ಮ ನೆ ಗೆ ಕ ಲ್ಲು ತೂ ರಾ ಟ ಮಾಡಿದ್ದರು.
ಜೆಡಿಎಸ್ ನಿಂದ ಮಾತ್ರ ಹಾಸನ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎನ್ನುವಂತಿತ್ತು. ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಜಿಲ್ಲೆಗೆ ಹೆಚ್ಚು ಅನುದಾನ ಹರಿದುಬರುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೇರೆ ವಿಧಾನಸಭಾ ಕ್ಷೇತ್ರಗಳಿಗಿಂತ ಅತಿ ಹೆಚ್ಚು ಅನುದಾನ ತಂದಿದ್ದು ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕೊರೊನಾ ಸಮಯದಲ್ಲಿ ಶಾಸಕ ಪ್ರೀತಂಗೌಡರ ಕಾರ್ಯವೈಖರಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಯಡಿಯೂರಪ್ಪ ಕುಟುಂಬಕ್ಕೆ ಆಪ್ತರಾಗಿರುವ ಪ್ರೀತಂಗೌಡರಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸಿಗುತ್ತದೆ ಎಂದು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಕಾದು ಕುಳಿತಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.
ಆದರೆ ಕೊನೆ ಕ್ಷಣದಲ್ಲಿ ಪ್ರೀತಂಗೌಡರಿಗೆ ಸಚಿವ ಸ್ಥಾನ ಕೈ ತ ಪ್ಪಿ ದೆ. ಇದಕ್ಕೆ ಪ್ರಮುಖ ಕಾರಣ ದೇವೇಗೌಡರ ಕುಟುಂಬ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೂ ಮುನ್ನ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಸುಧೀರ್ಘ ಮಾತುಕತೆ ನಡೆಸಿದ್ದರು. ಆದಾದ ಬಳಿಕ ನೂತನ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ದಿನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಆಶಿರ್ವಾದ ಪಡೆದು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು.
ಮೊನ್ನೆ ಮತ್ತೆ ರಾಷ್ಟ್ರೀಯ ಹೆದ್ದಾರಿ ವಿಷಯವಾಗಿ ದೆಹಲಿಗೆ ತೆರಳಿದ್ದ ದೇವೇಗೌಡರು ಹಾಗೂ ರೇವಣ್ಣ ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ್ದರು. ಈ ಬೆಳವಣಿಗೆ ಹೆಚ್ಚು ಕುತೂಹಲ ಮೂಡಿಸಿತ್ತು. ಇಷ್ಟೆಲ್ಲಾ ಆದರೂ ಪ್ರೀತಂಗೌಡರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ಹಾಸನದಿಂದ ಸುಮಾರು 200 ಹೆಚ್ಚು ಬೆಂಬಲಿಗರು ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದರು. ಆದರೆ ಇಂದು ಪ್ರಕಟವಾದ ಸಚಿನ ಸ್ಥಾನದ ಪಟ್ಟಿಯಲ್ಲಿ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರೀತಂಗೌಡರ ಹೆಸರು ಇಲ್ಲದಿರುವುದು ಅವರಿಗೆ ಅತೀವ ನಿರಾಸೆ ಮೂಡಿಸಿದೆ. ಸಚಿವ ಸ್ಥಾನ ತಪ್ಪಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಉರುಳಿಸಿದ ದಾ ಳ ಕಾರಣ ಎಂದು ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.