ಸಚಿವ ಸ್ಥಾನ ಸಿಗದ ಬೆನ್ನಲ್ಲೇ ಮಹತ್ವದ ತೀರ್ಮಾನ ಕೈಗೊಂಡ ರಮೇಶ್ ಜಾರಕಿಹೊಳಿ: ಏನದು ನೋಡಿ

in Kannada News/News 154 views

ಹುಬ್ಬಳ್ಳಿ:

Advertisement
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮತ್ತೂಂದು ಸುತ್ತಿನ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆಯೇ? ಅವರ ಚಲನವಲನ ಗಮನಿಸಿದರೆ ಅಂತಹ ಅನುಮಾನ ಮೂಡುತ್ತದೆ.

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂದಿನ ಇಡೀ ವಿದ್ಯಮಾನ ತಮ್ಮ ಸುತ್ತಲೇ ಸುತ್ತುವಂತೆ ಮಾಡಿಕೊಂಡಿದ್ದ ರಮೇಶ ಜಾರಕಿಹೊಳಿ, ಪ್ರಕರಣವೊಂದರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕೆಲ ದಿನಗಳವರೆಗೆ ಮೌನವಾಗಿದ್ದರು. ಬಳಿಕ ಒಂದಿಷ್ಟು ಚಟುವಟಿಕೆಗಳಿಗೆ ಮುಂದಾಗಿದ್ದರು. ಸಚಿವ ಸ್ಥಾನ ಮತ್ತೆ ಪಡೆಯುವ ನಿಟ್ಟಿನಲ್ಲಿ ತಮ್ಮದೇ ಒತ್ತಡ ತಂತ್ರಕ್ಕೆ ಮುಂದಾಗಿದ್ದರು. ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ನಂತರ ಮತ್ತೆ ಸಕ್ರಿಯರಾಗಿರುವ ರಮೇಶ ಜಾರಕಿಹೊಳಿ, ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲ ಶಾಸಕರ ಸಭೆ ನಡೆಸಿದ್ದರು. ಇದರಲ್ಲಿ ಕೆಲ ಶಾಸಕರು ಭಾಗಿಯಾಗಿದ್ದರು. ಶನಿವಾರ ಸಂಜೆ ದಿಢೀರನೇ ಹುಬ್ಬಳ್ಳಿಗೆ ಆಗಮಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ ಅವರನ್ನು ಭೇಟಿ ಮಾಡಿ ಸುಮಾರು 20 ನಿಮಿಷ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬಿಜೆಪಿಯ ಕೆಲ ಮೂಲಗಳ ಪ್ರಕಾರ ರಮೇಶ ಜಾರಕಿಹೊಳಿ ಅವರು ಜಗದೀಶ ಶೆಟ್ಟರ ಭೇಟಿ ಮಾಡಿದ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತಾಗಿ ಸಂಕ್ಷಿಪ್ತವಾಗಿ ಮಾತನಾಡಿದರು. ಮಹತ್ವದ ಬೆಳವಣಿಗೆಯಾಗುವಂತಹ ಚರ್ಚೆ ನಡೆದಿಲ್ಲ ಎನ್ನಲಾಗುತ್ತಿದೆ. ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಾರಕಿಹೊಳಿ ಕುಟುಂಬಕ್ಕೆ ಸಾಧ್ಯವಾಗದ ನಿಟ್ಟಿನಲ್ಲಿ ರಮೇಶ ಜಾರಕಿಹೊಳಿ ಮೊತ್ತೂಮ್ಮೆ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೆಲವೇ ಕೆಲವು ಅಸಮಾಧಾನಿತ ಶಾಸಕರು ಪಾಲ್ಗೊಂಡಿದ್ದರಾದರೂ ಸ್ಪಷ್ಟ ನಿಲುವು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.

ನೂತನ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬದಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅವಕಾಶ ನೀಡಲು ಮುಖ್ಯಮಂತ್ರಿಗಳೇ ಮುಂದಾಗಿದ್ದರು. ಆದರೆ, ಬಾಲಚಂದ್ರ ಜಾರಕಿಹೊಳಿ ಅವರು ಕೆಎಂಎಫ್‌ ಅಧ್ಯಕ್ಷ ಸ್ಥಾನದ ಜತೆಯಲ್ಲಿಯೇ ಸಚಿವ ಸ್ಥಾನ ನೀಡಬೇಕು, ಬೆಳಗಾವಿ ಜಿಲ್ಲೆ ಉಸ್ತುವಾರಿ ನೀಡಬೇಕೆಂಬ ಬೇಡಿಕೆ ಇರಿಸಿದ್ದರು ಎನ್ನಲಾಗಿದ್ದು, ಈ ಹಿಂದೆ ಎಚ್‌.ಡಿ.ರೇವಣ್ಣ ಅವರು ಕೆಎಂಎಫ್‌ ಅಧ್ಯಕ್ಷ ಸ್ಥಾನದ ಜತೆಗೆ ಸಚಿವರಾಗಿದ್ದನ್ನು ಪ್ರಸ್ತಾಪಿಸಿದ್ದರು ಎನ್ನಲಾಗುತ್ತಿದೆ. ಬೇಡಿಕೆಗಳ ಈಡೇರಿಕೆಗೆ ಸಾಧ್ಯವಾಗದ್ದರಿಂದ ಬಾಲಚಂದ್ರ ಜಾರಕಿಹೊಳಿ ಅವರು ಸಂಪುಟ ಸೇರ್ಪಡೆ ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.

ಮಾಜಿ ಸಚಿವ ಸಿಪಿ ಯೋಗೇಶ್ವರ್ ರಿಂದ ದೆಹಲಿಯಲ್ಲಿ ಸೀಕ್ರೆಟ್ ಮಿಷನ್?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪಟ ರಚನೆಯಾಗಿದ್ದು, ಇದರಿಂದ ಕೆಲವರು ಅಸಮಾಧಾನಗೊಂಡಿದ್ದಾರೆ. ಇದೀಗ ಅಸಮಾಧಾನಿತ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ದೆಹಲಿಗೆ ಬಂದಿಳಿದಿದ್ದಾರೆ.

ಹೌದು. ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಂದಿರುವ ಸಿ.ಪಿ ಯೋಗೇಶ್ವರ್, ಕರ್ನಾಟಕ ಭವನಕ್ಕೆ ತೆರಳಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಗಳಿವೆ. ಅಲ್ಲದೆ ಹೈಕಮಾಂಡ್ ಬಳಿ ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಅಸಮಾಧಾನ ಹೊರ ಹಾಕುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇದೇ ವೇಳೆ ಸಿಪಿವೈ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ವಕೀಲರ ಭೇಟಿಗೆ ಬಂದಿರುವುದಾಗಿ ಹೇಳುವ ಮೂಲಕ ದೆಹಲಿ ಭೇಟಿ ಬಗ್ಗೆ ಗೌಪ್ಯತೆ ಬಿಟ್ಟು ಕೊಡಲು ಹಿಂದೇಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸೈನಿಕ, ದೆಹಲಿಯಲ್ಲಿ ಸೀಕ್ರೆಟ್ ಮಿಷನ್ ಆರಂಭಿಸಿದ್ರಾ ಅನ್ನೋ ಅನುಮಾನವೊಂದು ಎದ್ದಿದೆ.

ಇತ್ತ ಹೈಕಮಾಂಡ್ ಒಂದು ವೇಳೆ ಸಿ.ಪಿ ಯೋಗೇಶ್ವರ್ ಭೇಟಿಗೆ ಸಮಯ ನೀಡಿದ್ದಲ್ಲಿ ದೆಹಲಿಗೆ ಬರುವ ಅಸಮಾಧಾನಿತರ ಸಂಖ್ಯೆ ಹೆಚ್ಚಳವಾಗಲಿದೆ. ಸಚಿವ ಸ್ಥಾನ ಸಿಗದ ನಾಯಕರು ಪದೇ ಪದೇ ಹೈಕಮಾಂಡ್ ಭೇಟಿಯಾಗುವ ಬೆಳವಣಿಗೆ ಹೆಚ್ಚಾಗಬಹುದು. ಈ ಹಿನ್ನೆಲೆ ಹೈಕಮಾಂಡ್ ಅವಕಾಶ ನೀಡುತ್ತಾ..? ಇಲ್ವಾ..? ಅನ್ನೋದು ಕುತೂಹಲ ಹುಟ್ಟಿದೆ.

ಒಟ್ಟಿನಲ್ಲಿ ಯೋಗೇಶ್ವರ್ ಗೆ ಅವಕಾಶ ಕೊಟ್ಟಲ್ಲಿ ಮತ್ತಷ್ಟು ಶಾಸಕರು ದೆಹಲಿಗೆ ಆಗಮಿಸುವ ಸಾಧ್ಯತೆ ಇದ್ದು, ಈ ಗೊಂದಲಕ್ಕೆ ವರಿಷ್ಠರು ಆಸ್ಪದ ಮಾಡಿಕೊಡುತ್ತಾರಾ ಅಥವಾ ಯೋಗೇಶ್ವರ್ ಭೇಟಿಗೆ ನಿರಾಕರಿಸಿ ಸ್ಪಷ್ಟ ಸಂದೇಶ ರವಾನಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Advertisement
Share this on...