ಪೆಗಾಸಸ್ ಪ್ರಕರಣದ ತನಿಖೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದ ಆಯೋಗದ ಮುಂದಿನ ಪ್ರಕ್ರಿಯೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಸಂಬಂಧ ನ್ಯಾಯಾಲಯ ನೋಟಿಸ್ ಕೂಡ ಜಾರಿ ಮಾಡಿದೆ. ನಿಮ್ಮ ಮಾಹಿತಿಗಾಗಿ ತಿಳಿಸಬಯಸುವ ವಿಷಯವೇನೆಂದರೆ ಪೆಗಾಸಸ್ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಈಗಾಗಲೇ ಸಮಿತಿಯನ್ನು ರಚಿಸಿದೆ.
BREAKING : Supreme Court Restrains Justice Lokur Commission Constituted By WB Govt From Probing Pegasus Case https://t.co/lAhR761iPU
— Live Law (@LiveLawIndia) December 17, 2021
ಶುಕ್ರವಾರ, ಡಿಸೆಂಬರ್ 17, 2021 ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರದ ತನಿಖಾ ಸಮಿತಿಗೆ ತಡೆ ನೀಡಿದೆ. ಗ್ಲೋಬಲ್ ವಿಲೇಜ್ ಫೌಂಡೇಶನ್ (ಎನ್‌ಜಿಒ) ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಅರ್ಜಿಯಲ್ಲಿ, ಆಯೋಗವನ್ನು ಸ್ಥಾಪಿಸಿದ ಪಶ್ಚಿಮ ಬಂಗಾಳ ಸರ್ಕಾರವನ್ನ ಸುಪ್ರೀಂಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದ ಹೊರತಾಗಿಯೂ ರಾಜ್ಯ ಸರ್ಕಾರದ ನ್ಯಾಯಮೂರ್ತಿ ಲೋಕುರ್ ಆಯೋಗವು ತನಿಖೆಯನ್ನು ಮುಂದುವರೆಸಿದೆ ಎಂದು ಅರ್ಜಿದಾರರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿಜೆಐ ಎನ್‌ವಿ ರಮಣ ಅವರು ನಿಮ್ಮ ಈ ಸಮಿತಿ ವಿಚಾರಣೆಯಾಗಲಿ, ತನಿಖೆಯಾಗಲಿ ನಡೆಸುವಂತಿಲ್ಲ ಎಂದು ಬಂಗಾಳ ಸರ್ಕಾರಕ್ಕೆ ಮೊದಲೇ ತಿಳಿಸಿದ್ದರು.
ಗಮನಿಸುವ ಅಂಶವೇನೆಂದರೆ ಅಕ್ಟೋಬರ್ 27ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ಅಧ್ಯಕ್ಷತೆಯಲ್ಲಿ ಪೆಗಾಸಸ್ ಪ್ರಕರಣದ ತನಿಖೆ ನಡೆಸುವಂತೆ ಆದೇಶ ಹೊರಡಿಸಿತ್ತು. ಆದರೆ, ವಿಚಾರಣೆ ವೇಳೆ ಬಂಗಾಳ ಸರ್ಕಾರ ತನಿಖೆ ಮುಂದುವರಿಸುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶದ ನೀಡಿದ ನಂತರ, ನ್ಯಾಯಮೂರ್ತಿ ಲೋಕೂರ್ ಸಮಿತಿಯು ತನಿಖೆಯನ್ನು ಮುಂದುವರೆಸಿದೆ. ಈ ಸಂಬಂಧ ಕೆಲವರಿಗೆ ಆಯೋಗ ನೋಟಿಸ್ ಕೂಡ ಕಳುಹಿಸಿತ್ತು. ಇದರ ವಿರುದ್ಧ ಎನ್‌ಜಿಒ ಗ್ಲೋಬಲ್ ವಿಲೇಜ್ ಫೌಂಡೇಶನ್ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಒತ್ತಾಯಿಸಿತ್ತು.
ಮಾಧ್ಯಮ ವರದಿಗಳ ಪ್ರಕಾರ, ಆಗಸ್ಟ್ 25 ರಂದು, ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಷಯ ಬಾಕಿ ಇರುವವರೆಗೆ ನ್ಯಾಯಾಂಗ ಆಯೋಗವು ತನಿಖೆಯನ್ನು ಪ್ರಾರಂಭಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಆಗಸ್ಟ್ 18 ರಂದು, ಪೆಗಾಸಸ್ ಬೇಹುಗಾರಿಕೆ ಆರೋಪಗಳನ್ನು ತನಿಖೆ ಮಾಡಲು ಬಂಗಾಳ ಸರ್ಕಾರವು ತನಿಖಾ ಆಯೋಗವನ್ನು ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಬಂಗಾಳ ಸರ್ಕಾರಕ್ಕೆ ನೋಟಿಸ್ ಕಳುಹಿಸಿತ್ತು.
ಈ ಪ್ರಕರಣದಲ್ಲಿ ಎನ್‌ಜಿಒ ಗ್ಲೋಬಲ್ ವಿಲೇಜ್ ಫೌಂಡೇಶನ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನಲ್ಲಿಯೇ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ, ಆಯೋಗವನ್ನು ಏಕೆ ರಚಿಸಲಾಯಿತು? ಎಂದು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು.