ನವದೆಹಲಿ: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಂದರೆ AIMIM ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಯಾವುದೇ ಅವಕಾಶವನ್ನು ಮಿಸ್ ಮಾಡಿಕೊಳ್ಳಲ್ಲ. ಇತ್ತೀಚೆಗೆ, ಅಸಾದುದ್ದೀನ್ ಓವೈಸಿ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ವಿರೋಧಿಸಿದ್ದರು. 18ರ ಹರೆಯದ ಯುವತಿಯೊಬ್ಬಳು ಮತ ಚಲಾಯಿಸಿ ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಲು ಆಯ್ಕೆ ಮಾಡಿಕೊಳ್ಳಬಹುದು, ಆದರೆ ಆಕೆ ಆ ವಯಸ್ಸಿನಲ್ಲಿ ಯಾಕೆ ಮದುವೆಯಾಗಬಾರದು? ಎಂದು ಓವೈಸಿ ವಾದಿಸಿದ್ದರು.
ಏತನ್ಮಧ್ಯೆ, ಜನರ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು (Voter Card) ಲಿಂಕ್ ಮಾಡುವ ಮಸೂದೆಗೆ ಮತ್ತೊಮ್ಮೆ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ನೋಟಿಸ್ ನೀಡುವ ಮೂಲಕ ಹೊಸ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ 2021ಕ್ಕೆ ಓವೈಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
Submitted notice to oppose Election Laws (Amendment), Bill 2021 which proposes to link AADHAAR to electoral roll enrolment. pic.twitter.com/dSEq7jhQKA
— Asaduddin Owaisi (@asadowaisi) December 20, 2021
ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುತ್ತಿದೆ. ಆದರೆ ಇದಕ್ಕೂ ಮುನ್ನ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದೇ ಸಮಯದಲ್ಲಿ, ಓವೈಸಿ ಆಧಾರ್ ಕಾರ್ಡ್‌ನ್ನ ಮತದಾರರ ಗುರುತಿನ ಚೀಟಿಯೊಂದಿಗೆ (Voter ID) ಲಿಂಕ್ ಮಾಡುವುದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಜನರ ಕೆಂಗಣ್ಣಿಗೆ ಗುರಿಯಾದರು. ಮೋದಿ ಸರ್ಕಾರದ ಈ ನಿರ್ಧಾರವನ್ನು ಬೆಂಬಲಿಸಿದ ಜನರು ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಶಿವ್ ಎಂಬ ಯೂಸರ್ ಈ ಬಗ್ಗೆ ಟ್ವೀಟ್ ಮಾಡಿ, ಓವೈಸಿಯನ್ನು ಗೇಲಿ ಮಾಡುತ್ತಾ, “ನೀವು ಎಷ್ಟೇ ಪ್ರಯತ್ನಿಸಿದರೂ ಕಾಗದವನ್ನು (ಕಾಗಜ್ ದಿಖಾನಾ ಹೀ ಹೋಗಾ) ತೋರಿಸಬೇಕಾಗುತ್ತದೆ” ಎಂದಿದ್ದಾರೆ.
ಒಬ್ಬ ಯೂಸರ್ ಟ್ವೀಟ್ ಮಾಡುತ್ತ, “ರೋಹಿಗ್ಯಾ ಬಾಂಗ್ಲಾದೇಶದ ವೋಟ್ ಸಿಗಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬ ಯೂಸರ್ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಟ್ವೀಟ್ ಮಾಡುತ್ತ, “ವೋಟರ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಒಳ್ಳೆಯದು. ಇದರಿಂದ ಬೋಗಸ್ ವೋಟಿಂಗ್ ಮತ್ತು ತಮ್ಮ ಗ್ರಾಮ ಮತ್ತು ನಗರಗಳಲ್ಲಿ ಎರಡೆರಡು ಮತದಾರರ ಚೀಟಿಗಳನ್ನು ಹೊಂದಿರುವವರನ್ನು ತಡೆಯಬಹುದು. ಈ ಯೋಜನೆಯನ್ನು ಏಕೆ ವಿರೋಧಿಸುತ್ತಿದ್ದೀರಿ?” ಎಂದಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಯನ್ನು (ಆಧಾರ್ ಜೊತೆ ವೋಟರ್ ಐಡಿ ಲಿಂಕ್) ಒವೈಸಿ ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಇದರಲ್ಲಿ, ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಲಿಂಕ್ ಮಾಡುವುದರಿಂದ ಹಲವಾರು ಅನಾನುಕೂಲತೆಗಳಿವೆ, ಇದರಲ್ಲಿ ನಾಗರಿಕರ ಸುರಕ್ಷತೆ ಮತ್ತು ಗೌಪ್ಯತೆಗೆ ಧಕ್ಕೆ ಉಂಟಾಗುತ್ತದೆ. ಇದರೊಂದಿಗೆ, ಇದು ರಹಸ್ಯ ಮತದಾನ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತದೆ” ಎಂದು ಓವೈಸಿ ಹೇಳಿದ್ದಾರೆ.