“ಮು*ಸಲ್ಮಾನರ ಜೊತೆ ಹೊಂದಾಣಿಕೆಯಾಗಲ್ಲ, ಇಸ್ಲಾಂಗೆ ಯೂರೋಪ್‌ನಲ್ಲಿ ಜಾಗವಿಲ್ಲ”: ಇಟಲಿ ಪ್ರಧಾನಿ

in Uncategorized 1,456 views

ಇಸ್ಲಾಮಿಕ್ ಸಂಸ್ಕೃತಿಗೂ ಮತ್ತು ಯೂರೋಪಿಯನ್ ನಾಗರೀಕತೆಗೂ ಹೊಂದಾಣಿಕೆಯ ಸಮಸ್ಯೆ ಇದ್ದು, ಇಸ್ಲಾಂಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.

Advertisement

ಬ್ರದರ್ಸ್ ಆಫ್ ಇಟಲಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ‘ಇಸ್ಲಾಮಿಕ್ ಸಂಸ್ಕೃತಿಯ ಕೆಲವು ವ್ಯಾಖ್ಯಾನಗಳು ಮತ್ತು ನಮ್ಮ ನಾಗರಿಕತೆಯ ಹಕ್ಕುಗಳು ಹಾಗೂ ಮೌಲ್ಯಗಳ ನಡುವೆ ಹೊಂದಾಣಿಕೆಯ ಸಮಸ್ಯೆ ಇದೆ. ಇಟಲಿಯಲ್ಲಿನ ಹೆಚ್ಚಿನ ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರಗಳು ಸೌದಿ ಅರೇಬಿಯಾದಿಂದ ಹಣಕಾಸು ಪಡೆಯುತ್ತವೆ ಎಂಬುದು ನನಗೆ ಗೊತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಕಾನೂನು ಎಂದು ಕರೆಯಲ್ಪಡುವ ಷರಿಯಾ ಕಾನೂನು, ಇಸ್ಲಾಂ ಧರ್ಮದ ಮೂಲಭೂತ ಧಾರ್ಮಿಕ ಪಠ್ಯಗಳಾದ ಕುರಾನ್ ಮತ್ತು ಹದೀಸ್‌ನಲ್ಲಿರುವ ನಿಬಂಧನೆಗಳ ಪ್ರಕಾರ ಶಿಕ್ಷೆಗಳನ್ನು ವಿಧಿಸತ್ತದೆ ಎಂದು ಹೇಳಿದರು.

ಅಂತೆಯೇ ಧರ್ಮದ ಕುರಿತ ಟೀಕೆ ಹಾಗೂ ಸಲಿಂಗಕಾಮಗಳ ಕುರಿತು ಸೌದಿ ಅರೇಬಿಯಾದ ಕಠಿಣ ಷರಿಯಾ ಕಾನೂನನ್ನು ಟೀಕಿಸಿದ ಅವರು, “ಷರಿಯಾದ ಪ್ರಕಾರ ವಿವಾಹೇತರ ಸಂಬಂಧ, ಧರ್ಮಭ್ರಷ್ಟತೆ ಮತ್ತು ಸಲಿಂಗಕಾಮಕ್ಕೆ ಮರಣದಂಡನೆ ವಿಧಿಸಲಾಗುತ್ತದೆ. ಈ ವಿಚಾರವನ್ನು ಇಂದು ನಾವು ವಿಮರ್ಶಿಸಬೇಕು. ಅಂದರೆ ಇಸ್ಲಾಂ ಧರ್ಮವನ್ನು ಜನರಲೈಸ್‌ ಮಾಡುವುದು ಎಂದರ್ಥವಲ್ಲ. ಈ ಮೂಲಕ ಯುರೋಪ್‌ನ ನಾಗರಿಕತೆಯ ಮೌಲ್ಯಗಳಿಗೂ ಇಸ್ಲಾಮ್‌ನ ಮೌಲ್ಯಗಳಿಗೂ ಬಹುದೂರವಿದೆ ಎಂಬುದನ್ನು ನಾವು ತಿಳಿಯಬೇಕು” ಎಂದು ಅವರು ಹೇಳಿದರು.

ಇದೇ ವೇಳೆ ಮೆಲೋನಿ, ಮೆಡಿಟರೇನಿಯನ್ ಸಮುದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷನಾ ಹಡಗುಗಳ ಚಟುವಟಿಕೆಗಳನ್ನು ಕಡಿತಗೊಳಿಸುವ ಪ್ರಯತ್ನಗಳಿಗೆ ಟೀಕೆ ಎದುರಿಸಿದ್ದಾರೆ.

“ನಾವು ಈ ಸಮಸ್ಯೆಯನ್ನು ನಿಭಾಯಿಸದಿದ್ದರೆ, ವಲಸೆ ಸಂಖ್ಯೆ ಬೆಳೆಯುತ್ತದೆ. ನಮ್ಮ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡುವ ನಮ್ಮ ಸಾಮರ್ಥ್ಯವನ್ನು ಇದು ಕುಂಠಿತಗೊಳಿಸುತ್ತದೆ. ಆ ಪ್ರತಿಬಂಧಕವನ್ನು ಮೀರುವುದು, ವಿಭಿನ್ನವಾಗಿ ಕೆಲಸ ಮಾಡುವುದು ಸಾಧ್ಯವಾಗಬೇಕು. ನಾನು ಮತ್ತು ಜಾರ್ಜಿಯಾ ಹಾಗೆ ಮಾಡಲು ಸಿದ್ಧರಿದ್ದೇವೆ” ಎಂದು ಸುನಕ್‌ ಹೇಳಿದ್ದಾರೆ. ಉಭಯ ನಾಯಕರೂ ಆಲ್ಬೇನಿಯನ್ ಪ್ರಧಾನಿ ಎಡಿ ರಾಮ ಅವರನ್ನು ಭೇಟಿಯಾಗಿ ವಲಸೆಯ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಸೆಲ್ಫೀ: ಒಳ್ಳೆಯ ಸ್ನೇಹಿತ ಎಂದು ಪೋಸ್ಟ್ ಮಾಡಿದ್ದ ಇಟಲಿ ಪ್ರಧಾನಿ ಮೆಲೋನಿ

ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು.

ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.

ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು.

ಇಲ್ಲಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದ ನಾಲ್ಕು ಅಧಿವೇಶನಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಸಮಾವೇಶದಲ್ಲಿ, ಪ್ರಧಾನಿ ಮೋದಿ ಮತ್ತು ಇತರ ಜಾಗತಿಕ ನಾಯಕರು ಒಟ್ಟಿಗೆ ಗ್ರೂಪ್ ಫೋಟೋ ಕೂಡ ತೆಗೆದುಕೊಂಡರು.

ಸಿಓಪಿ 28 ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಯೊಬ್ಬರೂ ಪರಿಸರದ ಬಗ್ಗೆ ಚಿಂತಿಸಬೇಕು ಎಂದರು. ನಮ್ಮ ಆರೋಗ್ಯದ ಬಗ್ಗೆ ನಾವು ಯೋಚಿಸುವಂತೆಯೇ ನಾವು ಅದರ ಬಗ್ಗೆ ಯೋಚಿಸಬೇಕು. ಇಂಗಾಲದ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿಮೆ ಮಾಡಲು ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆ ಇದೆ. 2030 ರ ವೇಳೆಗೆ ಇಂಗಾಲದ ಹೊರಸೂಸುವಿಕೆಯನ್ನು ಶೇಕಡಾ 45 ರಷ್ಟು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದರು.

Advertisement
Share this on...