ಅಯೋಧ್ಯಾ ಹಾಗೂ ಶ್ರೀರಾಮನ ಅವಹೇಳನ ಮಾಡಿದ್ದಾರೆಂದು ಆರೋಪ ಪ್ರಕರಣ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ ಸದಸ್ಯರು, ತನಿಖೆ ಪೂರ್ಣಗೊಳ್ಳುವವರೆಗೂ ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ಇನ್ನು ಇದೀಗ ತಪ್ಪು ಮಾಡಿದ್ದೇನೆ. ಯಾವುದೇ ತನಿಖೆ ವಿಚಾರಣೆಗೆ ಸಿದ್ದ ಎಂದಿದ್ದಾರೆ.ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಪೋಷಕರು, ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು.
ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಈ ವೇಳೆ ಪೊಲೀಸರು ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ತಡೆದಿದ್ದರು.
ಆಡಳಿತ ಮಂಡಳಿಯ ಸದಸ್ಯರು ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್ನಲ್ಲಿ ಶಿಕ್ಷಕಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದರು. ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ತರಗತಿಯಲ್ಲಿ ಪಠ್ಯಕ್ಕೆ ಸಂಬಂಧ ಪಡದ ಹಿಂದೂ ಧರ್ಮ ಹಾಗೂ ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದಾರೆ. ಅಯೋಧ್ಯೆಯಲ್ಲಿ ಮಸೀದಿ ಕೆಡವಿ ರಾಮಮಂದಿರ ಕಟ್ಟುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರಂತೆ ಶಿಕ್ಷಕಿ. ಅಷ್ಟೇ ಅಲ್ಲದೆ ಮೋದಿ ಗುಜರಾತ್ ನಲ್ಲಿ ಸಿಎಂ ಆಗಿದ್ದಾಗ ರೈಲಿನಲ್ಲಿ ಜನರನ್ನು ಕೊಂದಿದ್ದಾರೆ ಅಂತೆಲ್ಲ ಮುಗ್ಧ ಮಕ್ಕಳಮುಂದೆ ಹೇಳಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ. ಪಾಠದ ಮಧ್ಯೆ ಇದೆಲ್ಲ ಹೇಳುವ ಅವಶ್ಯಕತೆ ಸಿಸ್ಟರ್ ಪ್ರಭಾಗೆ ಇತ್ತಾಕ? ನಾವು ಹೆಡ್ಮಾಸ್ಟರ್ ಭೇಟಿಯಾಗಿ ತರಾಟೆಗೆ ತೆಗೆದುಕೊಂಡಿದ್ದೇವೆ ಸಿಸ್ಟರ್ ಫ್ರಭಾ ಅಮಾನತ್ತು ಮಾಡುವಂತೆ ಆಗ್ರಹಿಸಿದ್ದೇವೆ.
ಒಂದು ವೇಳೆ ಅಮಾನತ್ತು ಮಾಡದಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತೆ ಅಂತಾ ಎಚ್ಚರಿಕೆ ನೀಡಿದ್ದೇವೆ. ಸದ್ಯ ಮೂರು ದಿನಗಳ ಕಾಲಾವಕಾಶ ನೀಡಿದ್ದೇವೆ ಅಷ್ಟರೊಳಗೆ ಅಮಾನತ್ತು ಮಾಡಡಿದ್ದಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಪೋಷಕರು ತಿಳಿಸಿದ್ದರು ಹಾಗಾಗೀಯೆ ನಿನ್ನೆ ಶಾಲೆಯ ಎದುರಿಗೆ ಪಾಲಕರ ತಂಡ ನೆರೆದಿತ್ತು. ಒಟ್ಟಿನಲ್ಲಿ ಶ್ರೀರಾಮನ ಕುರಿತು ಹಿಂದೂ ಧರ್ಮದ ಕುರಿತು ಮಾತನಾಡುವ ಮುನ್ನ ಯೋಚಿಸಿ ಮಾತನಾಡುವುದು ಒಳ್ಳೆಯದು.