ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ತಿರುಗಿಬಿದ್ದ ಹಾಸನ ಶಾಸಕ ಪ್ರೀತಂಗೌಡ: ಸಚಿವ ಸ್ಥಾನಕ್ಕಲ್ಲ ಜೆಡಿಎಸ್ ಪಕ್ಷಕ್ಕಾಗಿ
ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ ಹಾಸನ್ ಅವರು ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಇದರಿಂದ…