ಹೆಂಡತಿಗೆ ಫೋನ್ ಮಾಡಿ ಆದಷ್ಟು ಬೇಗ ಬರ್ತೀನಿ ಅಂದ ಯೋಧ ಮರುದಿನ ಮನೆಗೆ ಬಂದಿದ್ದು ಶವವಾಗಿ
ಚಾಮರಾಜನಗರ: ಪತ್ನಿಗೆ ವೀಡಿಯೋ ಕಾಲ್ ಮಾಡಿ, ಆದಷ್ಟು ಬೇಗ ಮರಳಿ ಬರುತ್ತೇನೆಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಬಳಿಕ ಕೆಲವೇ ಗಂಟೆಗಳಲ್ಲಿ ಹೃದಯಾಘಾತದಿಂದ ಗುಂಡ್ಲುಪೇಟೆಯ ಯೋಧ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಶಿವಕುಮಾರ್(31) ಮೃತ ಸಿಆರ್ ಪಿಎಫ್ ಯೋಧ. ಹೃದಯಾಘಾತದಿಂದ ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಪತ್ನಿಗೆ ವೀಡಿಯೋ ಕಾಲ್ ಮಾಡಿ, ಆದಷ್ಟು ಬೇಗ ಮತ್ತೆ ಮನೆಗೆ ಬರುತ್ತೇನೆಂದು ಸಮಾಧಾನ ಹೇಳಿ ಫೋನ್ ಕಟ್ ಮಾಡಿದ್ದು, ಬಳಿಕ 3 ಗಂಟೆಗಳಲ್ಲಿ ಹೃದಯಾಘಾತವಾಗಿದೆ. ಯೋಧನನ್ನು ಆಸ್ಪತ್ರೆಗೆ…