ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ತಿರುಗಿಬಿದ್ದ ಹಾಸನ ಶಾಸಕ ಪ್ರೀತಂಗೌಡ: ಸಚಿವ ಸ್ಥಾನಕ್ಕಲ್ಲ ಜೆಡಿಎಸ್ ಪಕ್ಷಕ್ಕಾಗಿ

in Kannada News/News 154 views

ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು.

Advertisement

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ‌ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ ಹಾಸನ್ ಅವರು ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಇದರಿಂದ ಕಾರ್ಯಕರ್ತರು ದೃಢಗೆಡಬೇಕಿಲ್ಲ, ನಾನು ನಿಮ್ಮ ಜೊತೆ ಇದ್ದೇನೆ ಎಂದರು.

ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ ಸರ್ಕಾರ ಬೀಳಿಸದವರ ಮನೆಗೆ ಹೋಗಬಾರದಿತ್ತು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ದಿನ ಬೆಳಿಗ್ಗೆ ನಾವು ಜೆಡಿಎಸ್ ಪಕ್ಷದ ಗುದ್ದಾಡಿದ್ರೆ, ಇನ್ನೊಬ್ಬರು ಹೋಗಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಗೆ ಬರುವ ಯಾವುದೇ ಶಾಸಕರು ಜೆಡಿಎಸ್ ಶಾಸಕರ‌ ಮನೆಗೆ ಹೋಗಿ ಊಟ ಮಾಡಬಾರದು. ಇದರಿಂದ ಕಾರ್ಯಕರ್ತರಿಗೆ ನೋವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತಾಡುತ್ತೇನೆ. ಕಾರ್ಯಕರ್ತರಿಗೆ ಹೇಳಲಿ ಅಡ್ಜಸ್ಟ್​ಮೆಂಟ್ ಮಾಡಿ ಎಂದು, ನಾನು ಅಡ್ಜಸ್ಟ್ ಮಾಡ್ಕೊತಿನಿ. ದೇವೇಗೌಡರ ಭೇಟಿ ತಾ.ಪಂ., ಜಿ.ಪಂ. ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಸಿಎಂ ಬ್ಯೂಸಿ ಇದ್ದಾರೆ ನಮಗೆ ಟೈಂ ಕೊಟ್ಟಿಲ್ಲ. ಹೊಳೆನರಸೀಪುರದ ನಾಯಕರು ಇಡೀ ಜಿಲ್ಲೆ ನಮ್ಮ‌ ಜೇಬಿನಲ್ಲಿದೆ‌ ಅಂದುಕೊಂಡು ಓಡಾಡುತ್ತಿದ್ದಾರೆ. ಕಳೆದ ಕ್ಯಾಬಿನೆಟ್​ನಲ್ಲಿ ಹತ್ತು ಜನ ಒಕ್ಕಲಿಗರು ಇದ್ದರು. ಈ ಕ್ಯಾಬಿನೆಟ್​ನಲ್ಲಿ ಒಬ್ಬರು ಒಕ್ಕಲಿಗರಿಗೆ ಮಾತ್ರ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಬಿಜೆಪಿ ನಾಯಕರು ಮುಂದಿನ ಚುನಾವಣೆಯಲ್ಲಿ ಬಂದು ಜವಾಬ್ದಾರಿ ತೆಗೆದುಕೊಂಡು ಎಷ್ಟು ಸ್ಥಾನ ತಂದುಕೊಡುತ್ತಾರೆ ನೋಡೋಣ ಎಂದು ಪರೋಕ್ಷವಾಗಿ ತಮ್ಮ ಪಕ್ಷವನ್ನೇ ಟೀಕಿಸಿದರು.

 

ಮಂತ್ರಿಯಾಗಬೇಕೆಂದು ಆಸೆಯಿಲ್ಲ. ರಾಜಕೀಯ ಮಾಡಬೇಕೆಂಬ ಆಸೆಯಿದೆ ಎಂದು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಪ್ರೀತಂಗೌಡ, ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನೂರು ಮೀಟರ್ ಓಡಲಿಕ್ಕೆ ಬಂದಿಲ್ಲ, ಮ್ಯಾರಥಾನ್‌ ಓಡಲು ಬಂದಿದ್ದೇನೆ. ಯಾರ ಹತ್ರನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಮಂತ್ರಿ ಮಾಡಿಲ್ಲ ಅನ್ನೊದಕ್ಕಿಂತ ನಾನು ಕೇಳೇ ಇಲ್ಲ. ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಹಳೇ ಮೈಸೂರು ಭಾಗಕ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಅನ್ನೋ ನೋವು ಕಾರ್ಯಕರ್ತರಿಗೆ ಇದೆ ಎಂದು ಹೇಳಿದರು.

ಮುಖ್ಯಮಂತ್ರಿಯಾದ ಕೂಡಲೇ ಸುತ್ತೂರು, ಸಿರಿಗೆರೆ, ಸಿದ್ದಗಂಗಾ ಆದಿಚುಂಚನಗಿರಿ, ಮಠಕ್ಕೆ ಹೋಗ್ತಾರೆ ಅಂದುಕೊಂಡಿದ್ವಿ. ಆದರೆ, ದೇವೇಗೌಡರ ಮನೆಗೆ ಹೋಗಿರುವುದು ಕಾರ್ಯಕರ್ತರಿಗೆ ನೋವಾಗಿದೆ. ನಿಮ್ಮ ಮನೆಗೆ ಕಲ್ಲು ಹೊಡೆದವರ ಮನೆಗೆ ಕ್ಯಾಬಿನೆಟ್ ವಿಸ್ತರಣೆಗು ಮುನ್ನ ಹೋದರೆ ಹೇಗೆ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ನಾನು ಕಾರ್ಯಕರ್ತರನ್ನು ಸಮಾಧಾನ ಮಾಡಿದ್ದೀನಿ ಎಂದು ತಿಳಿಸಿದರು.

ಪ್ರೀತಂಗೌಡ ಗೆ ಸಚಿವ ಸ್ಥಾನ ತಪ್ಪಲು ದೇವೇಗೌಡರ ಕುಟುಂಬ ಕಾರಣ?

Pritam Gowda: ಕೊನೆ ಕ್ಷಣದಲ್ಲಿ ಪ್ರೀತಂಗೌಡರಿಗೆ ಸಚಿವ ಸ್ಥಾನ ಕೈ ತ ಪ್ಪಿ ದೆ. ಇದಕ್ಕೆ ಪ್ರಮುಖ ಕಾರಣ ದೇವೇಗೌಡರ ಕುಟುಂಬ ಎಂದು ಹೇಳಲಾಗುತ್ತಿದೆ.

ಹಾಸನ ಜಿಲ್ಲೆ ಜೆಡಿಎಸ್ ನ ಭ ದ್ರ ಕೋ ಟೆ. ಪ್ರಧಾನಿ ಮಂತ್ರಿ, ಮುಖ್ಯಮಂತ್ರಿಯನ್ನು ನೀಡಿದ ಜಿಲ್ಲೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರರಲ್ಲಿ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರೆ, ಜಿಲ್ಲೆಯ ಕೇಂದ್ರಬಿಂದು ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರೀತಂ ಜೆ.ಗೌಡ ಜಯಭೇರಿ ಬಾರಿಸುವ ಮೂಲಕ ಮೊದಲಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಾಸಕರಾದ ದಿನದಿಂದಲೂ ದೇವೇಗೌಡರ ಕುಟುಂಬದ ವಿ ರು ದ್ದ ತೊ ಡೆ ತ ಟ್ಟು ತ್ತ ಲೆ ಬಂದಿದ್ದರು. ಸಮ್ಮಿಶ್ರ ಸರ್ಕಾರ ಪ ತ ನ ಗೊ ಳಿ ಸಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿದವರಲ್ಲಿ ಪ್ರೀತಂಗೌಡ ಕೂಡ ಒಬ್ಬರು. ಆ ಪ ರೇ ಷ ನ್ ಕಮಲ‌ ನಡೆಸುವಾಗ ದೇವೇಗೌಡರ ಕುಟುಂಬದ ಬಗ್ಗೆ ಹ ಗು ರ ವಾಗಿ ಮಾತನಾಡಿದಾಗ ಜೆಡಿಎಸ್ ಕಾರ್ಯಕರ್ತರು ಶಾಸಕರ ಮ ನೆ ಗೆ ಕ ಲ್ಲು ತೂ ರಾ ಟ ಮಾಡಿದ್ದರು.

ಜೆಡಿಎಸ್ ನಿಂದ ಮಾತ್ರ ಹಾಸನ ಜಿಲ್ಲೆಯ ಅಭಿವೃದ್ಧಿ ಸಾಧ್ಯ‌ ಎನ್ನುವಂತಿತ್ತು. ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಜಿಲ್ಲೆಗೆ ಹೆಚ್ಚು‌ ಅನುದಾನ ಹರಿದುಬರುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೇರೆ ವಿಧಾನಸಭಾ ಕ್ಷೇತ್ರಗಳಿಗಿಂತ ಅತಿ ಹೆಚ್ಚು ಅನುದಾನ ತಂದಿದ್ದು ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕೊರೊನಾ ಸಮಯದಲ್ಲಿ ಶಾಸಕ ಪ್ರೀತಂಗೌಡರ ಕಾರ್ಯವೈಖರಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಯಡಿಯೂರಪ್ಪ ಕುಟುಂಬಕ್ಕೆ ಆಪ್ತರಾಗಿರುವ ಪ್ರೀತಂಗೌಡರಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸಿಗುತ್ತದೆ ಎಂದು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಕಾದು ಕುಳಿತಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಆದರೆ ಕೊನೆ ಕ್ಷಣದಲ್ಲಿ ಪ್ರೀತಂಗೌಡರಿಗೆ ಸಚಿವ ಸ್ಥಾನ ಕೈ ತ ಪ್ಪಿ ದೆ. ಇದಕ್ಕೆ ಪ್ರಮುಖ ಕಾರಣ ದೇವೇಗೌಡರ ಕುಟುಂಬ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೂ ಮುನ್ನ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಸುಧೀರ್ಘ ಮಾತುಕತೆ ನಡೆಸಿದ್ದರು. ಆದಾದ ಬಳಿಕ ನೂತನ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ದಿನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಆಶಿರ್ವಾದ ಪಡೆದು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು.

ಮೊನ್ನೆ ಮತ್ತೆ ರಾಷ್ಟ್ರೀಯ ಹೆದ್ದಾರಿ ವಿಷಯವಾಗಿ ದೆಹಲಿಗೆ ತೆರಳಿದ್ದ ದೇವೇಗೌಡರು ಹಾಗೂ ರೇವಣ್ಣ ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ್ದರು. ಈ ಬೆಳವಣಿಗೆ ಹೆಚ್ಚು ಕುತೂಹಲ ಮೂಡಿಸಿತ್ತು. ಇಷ್ಟೆಲ್ಲಾ ಆದರೂ ಪ್ರೀತಂಗೌಡರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ಹಾಸನದಿಂದ ಸುಮಾರು 200 ಹೆಚ್ಚು ಬೆಂಬಲಿಗರು ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದರು. ಆದರೆ ಇಂದು ಪ್ರಕಟವಾದ ಸಚಿನ ಸ್ಥಾನದ ಪಟ್ಟಿಯಲ್ಲಿ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರೀತಂಗೌಡರ ಹೆಸರು ಇಲ್ಲದಿರುವುದು ಅವರಿಗೆ ಅತೀವ ನಿರಾಸೆ ಮೂಡಿಸಿದೆ‌. ಸಚಿವ ಸ್ಥಾನ ತಪ್ಪಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಉರುಳಿಸಿದ ದಾ ಳ ಕಾರಣ ಎಂದು ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

Advertisement
Share this on...