“ಆರ್ಟಿಕಲ್ 370 ಇದ್ದಾಗ ಆಹಾ ಕಾಶ್ಮೀರ ಸ್ವರ್ಗದಂಗಿತ್ತು, ಅದನ್ನ ರದ್ದು ಮಾಡದ್ಮೇಲೆ ನರಕ ಆದಂಗಾಗಿದೆ, ನನಗಂತೂ ಇಲ್ಲಿ….”

in Kannada News/News 3,376 views

ಶ್ರೀನಗರ: ಆರ್ಟಿಕಲ್ 370 ರ ಅಡಿಯಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲು ರಾಜ್ಯದಲ್ಲಿ ಪರಿಸ್ಥಿತಿ ಚೆನ್ನಾಗಿತ್ತು ಅಷ್ಟೊಂದು ಕೆಟ್ಟದಾಗಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಹೇಳಿದ್ದಾರೆ.

Advertisement

ಕೇಂದ್ರಾಡಳಿತ ಪ್ರದೇಶವಾದ ನಂತರ ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದೆ ಎಂದು ಅವರು ಹೇಳಿದ್ದಾರೆ. ಆಗಸ್ಟ್ 2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿ ರಾಜ್ಯವನ್ನು ಎರಡು ಪ್ರದೇಶಗಳಾಗಿ ವಿಭಜಿಸಿತು.

ಅಮಿತ್ ಶಾ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿ, 370 ನೇ ವಿಧಿಯು ತಾರತಮ್ಯವಾಗಿದೆ. ಅದನ್ನು ರದ್ದುಗೊಳಿಸುವುದರೊಂದಿಗೆ ಜಮ್ಮು ಮತ್ತು ಕಾಶ್ಮೀರವು ಹೊಸ ಯುಗವನ್ನು ಪ್ರವೇಶಿಸಿದೆ ಎಂದು ಹೇಳಿದ್ದರು.

“370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯಾಗಿ ಆಸ್ಪತ್ರೆಗಳು ನಿರ್ಮಾಣವಾಗಲಿದ್ದು, ನಿರುದ್ಯೋಗ ಕಡಿಮೆಯಾಗಲಿದೆ ಎಂದು ಸರ್ಕಾರ ಹೇಳಿತ್ತು. ಆದರೆ ಹಾಗಾಗಲಿಲ್ಲ. ವಿಶೇಷ ಸ್ಥಾನಮಾನ ರದ್ದತಿಯಿಂದ ಅಪಾರ ನಷ್ಟ ಉಂಟಾಗಿದೆ ಎಂದು ಆಝಾದ್ ಹೇಳಿದ್ದಾರೆ.

ಕಾಶ್ಮೀರದ ವಿಷಯವಾಗಿ ಪಾಕ್ ಜೊತೆ ಮಾತುಕತೆ ನಡೆಸಬೇಕು ಎಂದ ಫಾರುಕ್ ಅಬ್ದುಲ್ಲಾಗೆ ತಿರುಗೇಟು ಕೊಟ್ಟ ಅಮಿತ್ ಶಾಹ್

ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವಂತೆ ಕೋರುತ್ತಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿನ ಅತ್ಯಂತ ಪ್ರಮುಖವಾದ ಪ್ರದೇಶವಾಗಿ ಇದನ್ನು ಅಭಿವೃದ್ಧಿಪಡಿಸಲು ಜಮ್ಮು-ಕಾಶ್ಮೀರದ ಯುವಕರೊಂದಿಗೆ ಸರ್ಕಾರ ಮಾತನಾಡಲು ಬಯಸುತ್ತದೆ ಎಂದಿದ್ದಾರೆ.

2019 ಆಗಸ್ಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿರುವ ಗೃಹ ಸಚಿವರು, ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕು ಸ್ಥಾಪನೆ ನೆರವೇರಿಸಿದರು.

ಸರ್ಕಾರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವಂತೆ ಫಾರೂಖ್ ಅಬ್ದುಲ್ಲಾ ಸಲಹೆ ನೀಡಿರುವುದನ್ನು ನ್ಯೂಸ್ ಪೇಪರ್ ನಲ್ಲಿ ಓದಿದ್ದೇನೆ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಹೊಂದಿದ್ದಾರೆ. ಆದರೆ, ನಾವು ಕಾಶ್ಮೀರಿ ಯುವ ಜನಾಂಗದೊಂದಿಗೆ ಮಾತುಕತೆ ನಡೆಸುವುದಾಗಿ ಎಸ್ ಕೆಐಸಿಸಿಯಲ್ಲಿ ನಡೆದ ಸಮಾರಂಭದಲ್ಲಿ ಅಮಿತ್ ಶಾ ಹೇಳಿದರು.

ಅಭಿವೃದ್ಧಿ ಹಾದಿಗೆ ತರಲು ಜಮ್ಮು-ಕಾಶ್ಮೀರವನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸುವ ಉದ್ದೇಶದಿಂದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದರು. ಬೆಮಿನಾದಲ್ಲಿ ಸುಮಾರು 115 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ, ಹಂದ್ವಾರದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ, 4 ಸಾವಿರ ಕೋಟಿ ರೂ. ಮೊತ್ತದ ರಸ್ತೆ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವಂತೆ ಸಲಹೆ ನೀಡುವವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಏನು ಮಾಡಿದೆ ಎಂಬುದನ್ನು ಕೇಳಲಿ, ಈ ಭಾಗ ಹಾಗೂ ಪಿಒಕೆ ನಡುವಣ ಅಭಿವೃದ್ಧಿಯನ್ನು ಹೋಲಿಕೆ ಮಾಡಲಿ, ಅವರಿಗೆ ವಿದ್ಯುತ್ , ರಸ್ತೆ, ಆರೋಗ್ಯ ಸೇವೆ, ಶೌಚಾಲಯವಿದೆಯೇ? ಏನು ಇಲ್ಲ. ಕಾಶ್ಮೀರಿಗಳು ಕೂಡಾ ದೇಶದ ಇತರ ಭಾಗಗಳಲ್ಲಿ ಹೊಂದಿರುವ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ತಿಳಿಸಿದರು.

Advertisement
Share this on...