ಬಿಗ್ ಬ್ರೇಕಿಂಗ್: ಜೂನ್ 7 ಅಲ್ಲ ಜೂನ್ 30 ರವರೆಗೆ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್?

in Kannada News/News 479 views

ಜೂನ್ 30ರ  ವರೆಗೂ ಲಾಕ್ಡೌನ್ ಮುಂದುವರಿಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

Advertisement

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಲಹೆಯ ಪ್ರಕಾರ ಜೂನ್ 30ರ ವರೆಗೆ ಎಲ್ಲ ರೀತಿಯ ನಿಯಮಗಳು ಮುಂದುವರಿಯಲಿವೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಕಠಿಣ ನಿಯಮಗಳಿಂದ ಮಾತ್ರ ದೇಶದಲ್ಲಿ ಕೊರೋನಾ ಪ್ರಮಾಣ ಇಳಿಮುಖ ಸಾಧ್ಯ. ಸಧ್ಯಕ್ಕೆ ಎಲ್ಲ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಎಲ್ಲ ಕಠಿಣನಿಯಮಗಳನ್ನೂ ಜೂನ್ 30ರವರೆಗೆ ಮುಂದುವರಿಸುವುದು ಸೂಕ್ತ. ಯಾವುದೇ ರೀತಿಯ ಸಡಿಲಿಕೆ ಬಗ್ಗೆ ಅಲ್ಲಿನ ಪರಿಸ್ಥಿತಿಯನ್ನು ನೋಡಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದೆ.

ಈ ವಿಷಯದಲ್ಲಿ ರಾಜ್ಯಗಳು ತಮ್ಮ ತಮ್ಮ ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡಿ ಕೊರೋನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜೂನ್ 30ರ ವರೆಗೂ ಮುಂದುವರಿಸುವಂತೆ ಸೂಚಿಸುವುದು ಎಂದು ಕೇಂದ್ರ ತಿಳಿಸಿದೆ.

ಈ ಸಂಬಂಧ ರಾಜ್ಯ ಸರಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಕಾದು ನೋಡಬೇಕಿದೆ. ರಾಜ್ಯದಲ್ಲಿ ಜೂನ್ 7ರ  ವರೆಗೆ ಲಾಕ್ಡೌನ್ ಇದೆ. ಅದನ್ನು ಮುಂದುವರಿಸಲಾಗುವುದೋ ಅಥವಾ ಅಲ್ಲಿಗೇ ಕೊನೆಗೊಳಿಸಲಾಗುವುದೋ ನಿರ್ಧಾರ ಇನ್ನೂ ಹೊರಬಿದ್ದಿಲ್ಲ.

ಲಾಕ್‌ಡೌನ್ ಮುಂದುವರೆಸುವುದರ ಬಗ್ಗೆ ರಾಜ್ಯ ಗೃಹಸಚಿವ ಬೊಮ್ಮಾಯಿ ಹೇಳಿದ್ದೇನು?

ಕೋವಿಡ್ – 19 ಸೋಂಕಿನ ಪ್ರಮಾಣ ಶೇಕಡ 10ಕ್ಕಿಂತ ಕಡಿಮೆ ಬರುವ ತನಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಸ್ತುತ ರಾಜ್ಯದಲ್ಲಿ ಸೋಂಕಿನ ದರ ಶೇ 10 ಕ್ಕಿಂತಲೂ ಹೆಚ್ಚಾಗಿದೆ. ಇದು ಶೇ 10 ಕ್ಕಿಂತ ಕಡಿಮೆ ಬರುವ ತನಕ ಲಾಕ್ ಸಡಿಲಿಕೆ ಇಲ್ಲ.ಇವಾಗಿರುವ ಕಠಿಣ ನಿಯಮಗಳೇ ಮುಂದುವರೆಯಲಿವೆ ಎಂದು ಹೇಳಿದರು.

ನಮಗೆ ಇರುವ ಗುರಿ ಸೋಂಕು ಕಡಿಮೆ ಪ್ರಮಾಣ ಕಡಿಮೆ ಮಾಡುವುದು.ಜೂನ್ 7 ರ ವರೆಗೆ ಇರುವ ಲಾಕ್ ಡೌನ್ ನನ್ನು ನಾವು ಪೂರ್ಣಗೊಳಿಸಲಿದ್ದು ಸದ್ಯಕ್ಕೆ ‌ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಇಲ್ಲ‌‌ ಎಂದು
ಅವರು ಸ್ಪಷ್ಟಪಡಿಸಿದರು.

ಈಗಾಗಲೇ ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ.ಹೀಗಾಗಿ ಇದರ ಬಗ್ಗೆ ರಾಜ್ಯದಲ್ಲಿ ಅನುಷ್ಠಾನ ಮಾಡುವ ಸಂಬಂಧ ಸಭೆ ನಿರ್ಧಾರ ಮಾಡಲಿದೆ ಎಂದು ಹೇಳಿದರು.ಎಲ್ಲ ಸಚಿವರ ಜೊತೆ ಸಿಎಂ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‌ ಶೀಘ್ರವೇ ಸಚಿವರ ಜೊತೆ ಸಭೆ ನಡೆಸಿ, ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಆದರೆ ಜೂನ್ 7ರ ವರೆಗೆ ಇರುವ ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎನ್ನುವ ಮೂಲಕ ಲಾಕ್ ಡೌನ್ ,ಅನ್ ಲಾಕ್ ಬಗ್ಗೆ ಉಂಟಾಗೊರುವ ಗೊಂದಲಗಳಿಗೆ ತೆರೆಎಳೆದರು.ನಿನ್ನೆ ಜಿಎಸ್ಟಿ ಕೌನ್ಸಿಲ್ ಸಭೆ ನಡೆದಿದೆ.ಸಭೆಯಲ್ಲಿ ಕರ್ನಾಟಕದ ಜಿಸ್ಟಿ ಪಾಲು ಕೊಡುವಂತೆ ಒತ್ತಾಯ ಮಾಡಲಾಗಿದೆ. 11000 ಕೋಟಿ ಕೊಡುವಂತೆ ಒತ್ತಡ ಹೇರಲಾಗಿದೆ ಎಂದರು.

ಅದನ್ನು ಕೇಂದ್ರ ಸರ್ಕಾರ ಶೀಘ್ರವೇ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಅದಲ್ಲದೆ ಲಾಕ್ ಡೌನ್ ಸಂಕಷ್ಟದಲ್ಲಿ ಉಂಟಾಗಿರುವ ಆರ್ಥಿಕ ನಷ್ಟ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ‌.ಕಳೆದ ಬಾರಿಯ ಲಾಕ್ ಡೌನ್ ನಲ್ಲೂ ಕೂಡ ಸಾಕಷ್ಟು ನಷ್ಟ ಉಂಟಾಗಿತ್ತು ಎಂದು ಮಾಹಿತಿ ನೀಡಿದರು.

ಈ ಬಾರಿಯ ಲಾಕ್ ಡೌನ್ ನಿಂದ ಸಾಕಷ್ಟು ನಷ್ಟ ಆಗುವ ನಿರೀಕ್ಷೆ ಇದೆ.ಈ ಬಗ್ಗೆ ತಜ್ಞರು ಸಮಿತಿ ವರದಿ ಪಡೆದು, ಮುಂದಿನ ಸಭೆಯಲ್ಲಿ ಪರಿಹಾರ ಪ್ರಮಾಣ ನಿಗಧಿ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದರು. ಸಂಕಷ್ಟದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವಿನ ನಿರೀಕ್ಷೆ ಯಲ್ಲಿದ್ದೇವೆ.ಮತ್ತೊಮ್ಮೆ ರಾಜ್ಯಕ್ಕೆ ಅಗತ್ಯ ವಿರುವ ಪರಿಹಾರ ಗಳ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.

Advertisement
Share this on...