ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಗುಂ-ಡಿನ ದಾಳಿ, ಚಾಲಕನಿಗೂ ಗಂಭೀರ ಗಾಯಗಳು: ಕ್ರಿಶ್ಚಿಯನ್ ಮಿಷನರಿಗಳು, ಪಾದ್ರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದ ರವಿ ಕೋಕಿತ್ಕರ್

in Uncategorized 300 views

ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಹಿಂಡಲಗಾ ಗ್ರಾಮದ ಬಳಿ ಜನವರಿ 7, 2023 ರ ತಡರಾತ್ರಿ ಈ ಘಟನೆ ನಡೆದಿದೆ. ಫೈರಿಂಗ್ ನಲ್ಲಿ ರವಿ ಅವರ ಚಾಲಕ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ಜನವರಿ 8, 2023) ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಮೇಲೆ ಅಪರಿಚಿತ ವ್ಯಕ್ತಿಗಳು ಫೈರಿಂಗ್ ಮಾಡಿದ್ದಾರಡ ಎಂದು ಹೇಳಿದರು. ಘಟನೆಯಲ್ಲಿ ಅವರ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ರವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ರವಿ ಮೇಲೆ ಫೈರಿಂಗ್ ಮಾಡಿದ ಅಪರಿಚಿತರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ರವಿ ಮೇಲೆ ಹಾರಿದ ಗುಂಡು ಅವರಿಗೆ ತಗುಲಿ ಮತ್ತೊಬ್ಬನಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಅವರೂ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿದ್ದಾರೆ. ಜಿಲ್ಲಾಧ್ಯಕ್ಷರ ಜತೆ ಯಾರಿಗೂ ದ್ವೇಷವಿರಲಿಲ್ಲ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ. ಇದಲ್ಲದೆ, ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಚೆಕ್ ಮಾಡುತ್ತಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನ್ನ ಮೇಲೆ ದಾಳಿ‌ ಮಾಡಿದ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ತಮ್ಮ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ರವಿ ಹೇಳುವ ವಿಡಿಯೋವೊಂದು ಹೊರಬಿದ್ದಿದೆ. ಘಟನೆಯಲ್ಲಿ ಅವರ ಚಾಲಕ ಕೂಡ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್‌ನಲ್ಲಿ ಕಾರು ನಿಧಾನ ಮಾಡಿದಾಗ
ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ
ಚಾಲಕನ ಕೈಗೆ ತಗಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆಯನ್ನು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ
ಹೇಳಿದ್ದಾರೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಡಿಸಿಪಿ ರವೀಂದ್ರ ಗಡಾದಿ, ನಗರ ಪೊಲೀಸ್
ಆಯುಕ್ತ ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

2021ರಲ್ಲಿ ಬೆಳಗಾವಿಯಲ್ಲಿ ನಡೆದ ಹಿಂದುಗಳ ಮತಾಂತರಕ್ಕೆ ಕ್ರೈಸ್ತ ಪಾದ್ರಿಗಳ ಗುಂಪೊಂದು ಕಾರಣ ಎಂದು ರವಿ ಆರೋಪಿಸಿದ್ದರು. ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಪಾದ್ರಿಗಳು ಬಂದು ಹಿಂದೂಗಳನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

Advertisement
Share this on...